ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ರಾಜ್ ಕುಮಾರ್ ತಿಳಿಸಿದರು.

ಮಧುರೆ ದೇವಾಲಯದ ಅನ್ನದಾಸೋಹ ಭವನದಲ್ಲಿಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಫೆ.26ರಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.

ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago