ಫೆಬ್ರವರಿ 27 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಉದ್ಯೋಗಮೇಳ” ಆಯೋಜಿಲಾಗಿದ್ದು , ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುತ್ತಿದ್ದು ಉದ್ಯೋಗಮೇಳದಲ್ಲಿ ಅಂದಾಜು 75ಕ್ಕಿಂತ ಹೆಚ್ಚು ನಿಯೋಜಕರು/ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ 3000ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು QR Code : ಅಥವಾ https://bangalorerural.nic.in ಬಳಸಿಕೊಂಡು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನವು ಕೂಡ “ಅಭ್ಯರ್ಥಿಗಳ ನೋಂದಣಿ ಕೌಂಟರ್” ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು.
10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
View Comments
It is a very helpfull for students and youth