Categories: ರಾಜ್ಯ

ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ನಡೆಸಲಾಯಿತು.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

5 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

10 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

13 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

24 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago