ಚಿಕ್ಕಬಳ್ಳಾಪುರ: ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಎಂ.ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ (34) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಮೃತ ಮಂಜುನಾಥ್ ಹೋಟೆಲ್ ವ್ಯಾಪಾರಕ್ಕಾಗಿ ನಾಲ್ಕೈದು ಫೈನಾನ್ಸ್ ಗಳಿಂದ 3 ಲಕ್ಷಕ್ಕೂ ಅಧಿಕ ಹಣ ಸಾಲ ಮಾಡಿದ್ದ ಎನ್ನಲಾಗಿದೆ.
ಕಳೆದ ಒಂದು ವಾರದಿಂದ ಈ ಫೈನಾನ್ಸ್ ಗಳು ನೀಡುತ್ತಿದ್ದ ಕಿರುಕುಳ ತಾಳಲಾರದೆ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಮಂಜುನಾಥ್ ಗೆ ಮದುವೆ ಆಗಿ ಒಂದು ವರ್ಷದ ಮಗು ಸಹ ಇದೆ ಎಂದು ತಿಳಿದುಬಂದಿದೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾವಿನ ಮನೆಯಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ
ಗ್ರಾಮಸ್ಥರು ಹಾಗೂ ಮೃತನ ಕುಟುಂಬಸ್ಥರಿಂದ ಎಲ್ಎನ್‌ಟಿ ಬ್ಯಾಂಕ್ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಕಿರುಕುಳ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.