ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ನಾಲ್ಕನೆಯ ವಾರದಿಂದ ಮೂವತ್ತು ದಿನಗಳ ಕಾಲ ನಿರುದ್ಯೋಗಿ ಯುವಕರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ನಿರುದ್ಯೋಗಿ ಯುವಕರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿಯು ಉಚಿತವಾಗಿದ್ದು, ಉಚಿತ ಊಟ ಹಾಗೂ ವಸತಿ ಸೌಕರ್ಯವನ್ನು ಶಿಬಿರಾರ್ಥಿಗಳಿಗೆ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದವರಾಗಿದ್ದು ಕನಿಷ್ಠ 8ನೇ ತರಗತಿ ಓದಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜುಲೈ 21ರ ಶುಕ್ರವಾರದಂದು ಬೆಳಿಗ್ಗೆ 10.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ 9591514154, 8970446644, 8970476050, 9535774621 ಮುಖಾಂತರ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ https://youtu.be/Q435wtXRttk ಈ ಲಿಂಕ್ ನ್ನು ಕ್ಲಿಕ್ ಮಾಡಿ.