ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…