ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್‌ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್‌ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago