ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯು ಅಕ್ಟೋಬರ್ 29 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 924142581ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…