ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 31 ದಿನಗಳ ಉಚಿತ ತರಬೇತಿಯು ಮಾರ್ಚ್ 09 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…