ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್‌ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 12 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

4 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

16 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

17 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

17 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

17 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

1 day ago