ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಸ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿಯು 25 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ 18 ರಿಂದ 45 ರ್ಷಗ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪಡೆಯಲು DSLR Camara ಕಡ್ಡಾಯವಾಗಿ ಹೊಂದಿರತಕ್ಕದ್ದು.
ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…