ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್‌ಗಳಲ್ಲಿನ ಅಧಿಕೃತ ಮಾಹಿತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ತೆಲಂಗಾಣದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎನ್.ಭುಜಂಗರಾವ್ ಬಂಧಿತರ ಅಧಿಕಾರಿಗಳು.
ಬಂಧಿತ ಆರೋಪಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್‌ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇದ್ದರು ಎನ್ನಲಾಗಿದೆ.
ಖಾಸಗಿ ವ್ಯಕ್ತಿಗಳ ಮೇಲೆ ನಿಗಾ ಇಡುವ ಸಂಚು, ಫೋನ್ ಕದ್ದಾಲಿಕೆಯಂತಹ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಬಂಧಿತರಾಗಿರುವ ವಿಶೇಷ ತನಿಖಾ ದಳದ (ಎಸ್‌ಐಬಿ) ಡಿಎಸ್‌ಪಿ ಆಗಿದ್ದ ಡಿ.ಪ್ರಣೀತ್ ಕುಮಾರ್ ಅಲಿಯಾಸ್ ಪ್ರಣೀತ್ ರಾವ್ ಮತ್ತು ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಡಿಎಸ್‌ಪಿ ಡಿ.ಪ್ರಣೀತ್ ರಾವ್ ಅವರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…