ಫ್ಯಾಶನ್‌ ಡಿಸೈನಿಂಗ್(ಟೈಲರಿಂಗ್) ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ‌ಫ್ಯಾಶನ್‌ ಡಿಸೈನಿಂಗ್(ಟೈಲರಿಂಗ್) ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಸೆಪ್ಟೆಂಬರ್‌ 05 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

10 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

13 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

14 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago