ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲ ಅಭಿವೃದ್ಧಿ ಕೇಂದ್ರ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ತರಬೇತಿ ಆಯೋಜಿಸಿದ್ದು ತರಬೇತಿ ಉಚಿತವಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್ .ಎಲ್.ಸಿ ಪಾಸ್ ಆಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
ತರಬೇತಿ ಅವಧಿಯಲ್ಲಿ ಫ್ಯಾಶನ್ ಡಿಸೈನಿಂಗ್/ ಬ್ಯೂಟಿಶಿಯನ್ ಕುರಿತ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಸರ್ಕಾರದ ವಿವಿಧ ಸ್ವಯಂ ಉದ್ಯೋಗ ಸಾಲ ಯೋಜನೆಗಳು, ಯೋಜನೆ ವರದಿ ತಯಾರಿಕೆ, ಮಾರುಕಟ್ಟೆ ಹಾಗೂ ಲೆಕ್ಕಪತ್ರಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ 7760145784, 8147024186 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…