ಮಾದಕ ವಸ್ತುಗಳ ವ್ಯಸನ ಮಾನಸಿಕ ಹಾಗೂ ದೈಹಿಕ ಕಾಯಿಲೆಯಾಗಿದ್ದು, ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜಯ್ಯ ಅವರು ತಿಳಿಸಿದರು.
ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಮದ್ಯ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಜಾಥಾ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಮೇಲೆ ಮಾನಸಿಕವಾಗಿ, ದೈಹಿಕವಾಗಿ ದುಷ್ಪರಿಣಾಮಗಳು ಉಂಟಾಗುತ್ತವೆ. ಮದ್ಯ, ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ, ಗಾಂಜಾ, ಅಫೀಮು, ನೋವು ನಿವಾರಕ ಹಾಗೂ ನಿದ್ರಾಜನಕ ಮಾತ್ರೆಗಳು ಮಾದಕ ವಸ್ತುಗಳಾಗಿವೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಯುವಕರು ಇಂಥ ಚಟಗಳಿಂದ ದೂರವಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕ್ಷೇತ್ರ ಅರೋಗ್ಯ ರಕ್ಷಣಾಧಿಕಾರಿ ಜಯಲಕ್ಷ್ಮಿ ಅವರು ಮಾತನಾಡಿ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಯುವಜನತೆಯು ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ,ಉದ್ಯೋಗದಲ್ಲಿ ತೊಂದರೆ, ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ದುಶ್ಚಟಗಳಿಂದ ದೂರವಿರಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಕುಮಾರ್ ಡಿ, ದೈಹಿಕ ಶಿಕ್ಷಕರಾದ ರವಿ ಸೇರಿದಂತೆ ಅಧಿಕಾರಿಗಳು ಮತ್ತು ಕಾಲೇಜು ಉಪನ್ಯಾಸಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…