ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ.

ಮೃತರನ್ನು ಚೈತನ್ಯನಗರ ನಿವಾಸಿ ಮೀನಾಕ್ಷಿ ಎಂ ಎಂದು ಗುರುತಿಸಲಾಗಿದೆ.

ಮೇ 22ರಂದು ಸಂಜೆ ಸುಮಾರು 6:30ರ ವೇಳೆಗೆ ಮೀನಾಕ್ಷಿಯವರು ತಮ್ಮ ಮನೆಯಲ್ಲಿ ಫ್ರಿಡ್ಜ್ ಕ್ಲೀನ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಕುಟುಂಬಸ್ಥರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದೇ ವೇಳೆ, ವಿದ್ಯುತ್ ಉಪಕರಣಗಳನ್ನು ಬಳಸುವಾಗ ಹಾಗೂ ಸ್ವಚ್ಛಗೊಳಿಸುವ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಗುಂಡಿ ತಪ್ಪಿಸಲು ಹೋಗಿ ಅವಘಡ: ಬಾಯ್ತೆರೆದ ಚರಂಡಿಗೆ ಉರುಳಿದ ಆಟೋ: ಭಗತ್ ಸಿಂಗ್ ಮೈದಾನದ ರಸ್ತೆ ಅಪಾಯದ ತಾಣ!: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಮೈದಾನದ ರಸ್ತೆಯಲ್ಲಿ ಬಾಯ್ತೆರೆದಿರುವ ಚರಂಡಿ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದು, ರಸ್ತೆಯಲ್ಲಿನ ಗುಂಡಿ ತಪ್ಪಿಸುವ…

11 hours ago

3 ವರ್ಷಗಳಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನ ಕಾಮಗಾರಿಗೆ ಮರುಜೀವ: 39.91 ಲಕ್ಷ ರೂ. ಅನುದಾನ ಬಿಡುಗಡೆ: 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ- ಮುನಿಕೃಷ್ಣಪ್ಪ

ದೊಡ್ಡಬಳ್ಳಾಪುರ: ನಗರದ ತೆರಿನಬೀದಿ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ವಾಲ್ಮೀಕಿ ಭವನದ ಕಟ್ಟಡ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಅನುದಾನದ…

23 hours ago

ತೂಬಗೆರೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನಾ ಸಭೆ: ಮನೆ, ನಿವೇಶನ, ರಸ್ತೆ, ಕುಡಿಯುವ ನೀರಿಗೆ ಆದ್ಯತೆ- ಸಚಿವ ಮುನಿಯಪ್ಪ

ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿ ಬಂದು ಅಹವಾಲು ಸ್ವೀಕರಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ಶನಿವಾರ…

1 day ago

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವ ಕೆ.ಎಚ್. ಮುನಿಯಪ್ಪ ಸೂಚನೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಮಾಜ…

1 day ago

ಡಿಮೆನ್ಸಿಯಾ ಆರೈಕೆಗೆ ನೈಟಿಂಗೇಲ್ಸ್ ಸ್ಮೃತಿ ಗ್ರಾಮ ಲೋಕಾರ್ಪಣೆ

ದೊಡ್ಡಬಳ್ಳಾಪುರ: ಡಿಮೆನ್ಸಿಯಾದಿಂದ ಬಳಲುತ್ತಿರುವ ಅಸಹಾಯಕ ಹಿರಿಯ ನಾಗರಿಕರಿಗೆ ಗೌರವಯುತ, ಸುರಕ್ಷಿತ ಹಾಗೂ ಗುಣಮಟ್ಟದ ಆರೈಕೆ ಒದಗಿಸುವ ಉದ್ದೇಶದಿಂದ ತಾಲೂಕಿನ ತಿರುಮಗೊಂಡನಹಳ್ಳಿ…

1 day ago

ಬುಡಸಮೇತ ಧರೆಗುರುಳಿದ ಬೃಹತ್ ಮರ: ವಾಹನಗಳು ಜಖಂ

ದೊಡ್ಡಬಳ್ಳಾಪುರ: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ (ಟಿಬಿ ವೃತ್ತ) ಸಮೀಪದ ಪ್ರವಾಸಿ ಮಂದಿರದ ಬಳಿ ಬೃಹತ್ ಮರವೊಂದು ಬುಡಸಮೇತ ಧರೆಗುರುಳಿದ…

2 days ago