ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ ತಾಕುಗಳನ್ನು ಸೇರ್ಪಡೆಗೊಳಿಸುವುದು ಕಡ್ಡಾಯವಾಗಿರುತ್ತದೆ.
ರೈತರಲ್ಲಿ ನೋಂದಣಿ ಮಾಡಿಸಿಕೊಳ್ಳುವ ಕುರಿತು ಅರಿವು ಮೂಡಿಸುತ್ತಿದ್ದರೂ ಇನ್ನು ಹಲವು ತಾಕುಗಳು ಸೇರ್ಪಡೆಗೆ ಬಾಕಿ ಉಳಿದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ತಾಕುಗಳನ್ನು ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ಡಿ.26ರಿಂದ ಡಿ.30ರವರೆಗೆ ಅಭಿಯಾನ ಕೈಗೊಳ್ಳಲಾಗುತ್ತಿದೆ.
ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಹೋಬಳಿ ವ್ಯಾಪ್ತಿಗೆ ನಿಯೋಜಿಸಿದ್ದು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ರೈತರು ತಮ್ಮ ತಾಕುಗಳನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು.
ಅಧಿಕಾರಿಗಳು ಅಭಿಯಾನದ ಸಮಯದಲ್ಲಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಅಗತ್ಯ ದಾಖಲೆಗಳನ್ನು (ಪಹಣಿ ಪತ್ರಿಕೆ, ಆಧಾರ್ ಸಂಖ್ಯೆ, ಬ್ಯಾಂಕ್ ಪಾಸು ಪುಸ್ತಕ, ಹಾಗೂ ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪತಿಗಳನ್ನು ಒದಗಿಸಿ ಸಹಕರಿಸಬೇಕು.
ಅಲ್ಲದೇ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಹಾಗೂ ಬಾಕಿಯಿರುವ ತಾಕುಗಳನ್ನು ಸೇರ್ಪಡೆಗೊಳಿಸುವ ಕುರಿತು ರೈತರ ಕರೆಗಳಿಗೆ ಮಾಹಿತಿ ನೀಡುವ ಸಲುವಾಗಿ ಉಪ ಕೃಷಿ ನಿರ್ದೇಶಕರ ಕಚೇರಿ, ಬೀರಸಂದ್ರ, ಬೆಂಗಳೂರು ಜಿಲ್ಲೆ ಇಲ್ಲಿ ರೈತರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.
ರೈತರು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ಮಾಹಿತಿಗಾಗಿ ಪೂರ್ವಾಹ್ನ 8.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕೇಂದ್ರದ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:080-26676143 ರೈತರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…