ಫ್ರೂಟ್ಸ್ ತಂತ್ರಾಂಶದಲ್ಲಿ ತಾಕುಗಳ ಕಡ್ಡಾಯ ಸೇರ್ಪಡೆ- ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಿರಿ- ಜಿಲ್ಲಾಧಿಕಾರಿ ಕರೆ

ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ ತಾಕುಗಳನ್ನು ಸೇರ್ಪಡೆಗೊಳಿಸುವುದು ಕಡ್ಡಾಯವಾಗಿರುತ್ತದೆ.

ರೈತರಲ್ಲಿ ನೋಂದಣಿ ಮಾಡಿಸಿಕೊಳ್ಳುವ ಕುರಿತು ಅರಿವು ಮೂಡಿಸುತ್ತಿದ್ದರೂ ಇನ್ನು ಹಲವು ತಾಕುಗಳು ಸೇರ್ಪಡೆಗೆ ಬಾಕಿ ಉಳಿದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ತಾಕುಗಳನ್ನು ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ಡಿ.26ರಿಂದ ಡಿ.30ರವರೆಗೆ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಹೋಬಳಿ ವ್ಯಾಪ್ತಿಗೆ ನಿಯೋಜಿಸಿದ್ದು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ರೈತರು ತಮ್ಮ ತಾಕುಗಳನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು.

ಅಧಿಕಾರಿಗಳು ಅಭಿಯಾನದ ಸಮಯದಲ್ಲಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಅಗತ್ಯ ದಾಖಲೆಗಳನ್ನು (ಪಹಣಿ ಪತ್ರಿಕೆ, ಆಧಾ‌ರ್ ಸಂಖ್ಯೆ, ಬ್ಯಾಂಕ್ ಪಾಸು ಪುಸ್ತಕ, ಹಾಗೂ ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪತಿಗಳನ್ನು ಒದಗಿಸಿ ಸಹಕರಿಸಬೇಕು.

ಅಲ್ಲದೇ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಹಾಗೂ ಬಾಕಿಯಿರುವ ತಾಕುಗಳನ್ನು ಸೇರ್ಪಡೆಗೊಳಿಸುವ ಕುರಿತು ರೈತರ ಕರೆಗಳಿಗೆ ಮಾಹಿತಿ ನೀಡುವ ಸಲುವಾಗಿ ಉಪ ಕೃಷಿ ನಿರ್ದೇಶಕರ ಕಚೇರಿ, ಬೀರಸಂದ್ರ, ಬೆಂಗಳೂರು ಜಿಲ್ಲೆ ಇಲ್ಲಿ ರೈತರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

ರೈತರು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ಮಾಹಿತಿಗಾಗಿ ಪೂರ್ವಾಹ್ನ 8.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕೇಂದ್ರದ ಮೂಲಕ ಮಾಹಿತಿ ಪಡೆಯಬಹುದಾಗಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:080-26676143 ರೈತರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago