Categories: ಟೆನಿಸ್

ಫ್ರೆಂಚ್ ಓಪನ್‌-2023- ಪುರುಷರ ಸಿಂಗಲ್ಸ್ ಫೈನಲ್ ಗೆದ್ದ ನೊವಾಕ್ ಜೊಕೊವಿಕ್ : ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ನೊವಾಕ್ ಜೊಕೊವಿಕ್

ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ನಡೆದ ಫ್ರೆಂಚ್ ಓಪನ್ ಫೈನಲ್‌ನಲ್ಲಿ ಕ್ಯಾಸ್ಪರ್ ರೂಡ್ ಅವರನ್ನು ಸೋಲಿಸಿದ ನಂತರ ಅವರು 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ರಾಫೆಲ್ ನಡಾಲ್ ಅವರನ್ನು ಹಿಂದಿಕ್ಕಿದ್ದಾರೆ.

ಮೂರು ಗಂಟೆ 13 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸರ್ಬಿಯಾದ 36ರ ಹರೆಯದ ಜೊಕೊವಿಕ್ 7-6, 6-3, 7-5 ಸೆಟ್‌ಗಳಿಂದ ಗೆದ್ದರು. ಅವರು ನಡಾಲ್‌ಗಿಂತ ಒಂದು ಪ್ರಶಸ್ತಿಯಿಂದ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಟೆನಿಸ್‌ನಿಂದ ನಿವೃತ್ತರಾಗಿರುವ ರೋಜರ್ ಫೆಡರರ್ ಅವರಿಗಿಂತ ಮೂರು ಪ್ರಶಸ್ತಿಗಳ ಮುಂದಿದ್ದಾರೆ.

ರೊಲ್ಯಾಂಡ್ ಗ್ಯಾರೋಸ್‌ನಲ್ಲಿ 14 ಬಾರಿ ಚಾಂಪಿಯನ್ ಆಗಿರುವ ನಡಾಲ್ ಗಾಯದ ಕಾರಣ ಈ ಬಾರಿ ಆಡುತ್ತಿಲ್ಲ. ಜೊಕೊವಿಕ್ 2016 ಮತ್ತು 2021ರಲ್ಲಿಯೂ ಪ್ರಶಸ್ತಿ ಗೆದ್ದಿದ್ದರು. ಹತ್ತು ಆಸ್ಟ್ರೇಲಿಯನ್ ಓಪನ್‌ಗಳು, ಏಳು ವಿಂಬಲ್ಡನ್ ಮತ್ತು ಮೂರು ಯುಎಸ್ ಓಪನ್‌ಗಳನ್ನು ಗೆದ್ದಿದ್ದಾರೆ.

ನೊವಾಕ್ ಜೊಕೊವಿಕ್ ಮತ್ತೊಮ್ಮೆ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಗ್ರ್ಯಾಂಡ್ ಸ್ಲಾಮ್‌ಗಳನ್ನು ಗೆಲ್ಲುವ ಹಾದಿಯಲ್ಲಿದ್ದಾರೆ. ರಾಡ್ ಲೇವರ್ ಈ ಸಾಧನೆಯನ್ನು 1969ರಲ್ಲಿ ಮಾಡಿದ್ದರು. ಅದನ್ನು ಯಾರೂ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಜೊಕೊವಿಕ್ 2021ರಲ್ಲಿ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಗೆಲ್ಲುವ ಮೂಲಕ ಹತ್ತಿರ ಬಂದರು. ಆದರೆ ಯುಎಸ್ ಓಪನ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.

ವಿಂಬಲ್ಡನ್ ಜುಲೈ 3 ರಿಂದ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ನಡೆಯಲಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಪಡೆಯದ ಕಾರಣ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಮತ್ತು ಯುಎಸ್ ಓಪನ್ ಆಡಲು ಸಾಧ್ಯವಾಗಲಿಲ್ಲ.

ಏನೇ ಆದರೂ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗಣ್ಯರು ಅಭಿನಂದನೆಗಳ ಹೊಳೆ ಹರಿಸಿದ್ದಾರೆ. ಅದೇ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ನೊವಾಕ್ ಜೊಕೊವಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನೊವಾಕ್ ಜೊಕೊವಿಕ್ ಸೆರ್ಬಿಯಾ, ಭಾರತ ಮತ್ತು ಪ್ರಪಂಚದಾದ್ಯಂತ ಯುವಕರಿಗೆ ಸ್ಫೂರ್ತಿದಾಯಕ ಐಕಾನ್ ಆಗಿದ್ದಾರೆ. ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಪ್ರಶಂಸೆ ಮಾಡಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

3 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

5 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

5 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

6 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

7 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

12 hours ago