ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪ್ರಭಾವ ಕರ್ನಾಟಕದ ಹಲವು ಜಿಲ್ಲೆಗಳಿಗೆ ತಟ್ಟಿದೆ. ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸದ್ಯ ಈಗ ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಲ ದಿನಗಳ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕೆಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಪ್ರಭಾವದಿಂದ ವ್ಯಾಪಕ ಮಳೆಯಾಗಿತ್ತು. ಇದರಿಂದ ಜನ ತತ್ತರಿಸಿಹೋಗಿದ್ದರು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ತಮಿಳು ನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರ ಪ್ರಭಾವ ದೊಡ್ಡಬಳ್ಳಾಪುರಕ್ಕೂ ತಟ್ಟಿದ್ದು, ಜನರು ಕೊಡೆ ಹಿಡಿದು ಮತ್ತದೇ ಮಳೆಗೆ ನಲುಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯಿಂದ ಎಚ್ಚರಿಕೆ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…