ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಭಾರೀ ವಿರೋಧ: ಅಧಿಕಾರಿಗಳ ಎದುರೇ ಜೆಸಿಬಿಗೆ ಬೆಂಕಿ ಹಚ್ಚಿದ ಒತ್ತುವರಿದಾರರು

ಸರ್ಕಾರಿ ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿಂದು ನಡೆದಿದೆ.

ಶಿವಕೋಟೆ ಗ್ರಾಮ್ ಸರ್ವೇ ನಂ. 10/7 ಮತ್ತು 8ರಲ್ಲಿ ಬಂಡಿದಾರಿ ತೆರವಿಗೆ ಪೊಲೀಸ್ ನೆರವುನೊಂದಿಗೆ‌ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಸರ್ಕಾರಿ ಜಾಗ ಒತ್ತುವರಿದಾರರಿಂದ ವಿರೋಧ ವ್ಯಕ್ತವಾಗಿದೆ. ಅಧಿಕಾರಿಗಳ ಕಾರ್ಯಕ್ಕೆ ಒತ್ತುವರಿದಾರರು ಗಲಾಟೆ ನಡೆಸಿ ಜೆಸಿಬಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಕೃತ್ಯ ಎಸಿಗಿದವರನ್ನ ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಜೆಸಿಬಿ. ಸದ್ಯ ಅಧಿಕಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.

ಕಂದಾಯ ಇಲಾಖೆಯಿಂದ ರಸ್ತೆ ಒತ್ತುವರಿ ತೆರವು ಕಾಮಗಾರಿ ವೇಳೆ ಅಡ್ಡಿಪಡಿಸಿದ ಒತ್ತುವರಿದಾರರು. ನಂತರ ಜೆಸಿಬಿಗೆ ಬೆಂಕಿ ಹಚ್ಚಿದ್ದಾರೆ.  ನಾವು ಇದಕ್ಕೆ ಬೆದರುವುದಿಲ್ಲ.  ನಮ್ಮ ಸಂಕಲ್ಪ ದೃಢವಾಗಿದೆ. ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

3 hours ago

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

6 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

9 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

9 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

10 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

13 hours ago