ದೊಡ್ಡಬಳ್ಳಾಪುರ: ಬಕ್ರೀದ್ ಹಬ್ಬದ ಹಿನ್ನೆಲೆ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಹಸುಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿರುವ ಘಟನೆ ಮೇ.27ರ ರಾತ್ರಿ ನಡೆದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬಕ್ರೀದ್ ಹಬ್ಬದ ಹಿನ್ನೆಲೆ ಠಾಣಾ ವ್ಯಾಪ್ತಿಯ ಕಂಟನಕುಂಟೆ ಸಮೀಪ ಚೆಕ್‌ಪೋಸ್ಟ್ ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಸಾಗುತ್ತಿದ್ದ ವಾಹನವನ್ನು ತಪಾಸಣೆ ಮಾಡಿದಾಗ, ನಾಲ್ಕು ಹಸುಗಳನ್ನು ಕಸಾಯಿಖಾನೆಗೆ ರವಾನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಹಸುಗಳನ್ನು ಸಾಗಾಟ ಮಾಡಲಾಗುತ್ತಿದ್ದು, ಈ ಸಂಬಂಧ ದೊಡ್ಡಬಳ್ಳಾಪುರ ತಾಲೂಕಿನ ರಾಜೀವ್ ಗಾಂಧಿ ಬಡಾವಣೆಯ ಯತೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪ್ರತಿ ಹಸುವಿನ ಮೌಲ್ಯ ಅಂದಾಜು ₹50 ಸಾವಿರಕ್ಕೂ ಅಧಿಕ ಎಂದು ತಿಳಿದುಬಂದಿದೆ. ರಕ್ಷಣೆ ಮಾಡಲಾದ ಹಸುಗಳನ್ನು ಬಳಿಕ ಗೋಶಾಲೆಗೆ ರವಾನೆ ಮಾಡಲಾಗಿದೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…