ಜಿಲ್ಲೆಯಲ್ಲಿ ಜೂನ್ 07 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಿತರೆ ದಿನಗಳಲ್ಲಿ ಕರ್ನಾಟಕದಾದ್ಯಂತ 13 ವರ್ಷದೊಳಗಿನ ಹಸು, ಕರು, ಎತ್ತು, ಹೋರಿ ಹಾಗೂ ಎಮ್ಮೆ ಮುಂತಾದ ಗೋವಾಂಶಾಧಿ ಜಾನುವಾರುಗಳ ಹತ್ಯೆಗಳು, ಹಾಗೇ ಇಂತಹ ಸಂದರ್ಭದಲ್ಲಿ ಪ್ರಾಣಿಗಳ ಕಳ್ಳ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು, ಸಾರ್ವಜನಿಕರು ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿರುತ್ತದೆ.
ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…