ಜೂನ್ 29ರಂದು ನಡೆಯಲಿರುವ ಬಕ್ರೀದ್ ಹಬ್ಬ ದಾನ ಧರ್ಮದ ಹಬ್ಬವಾಗಿದ್ದು, ಹಬ್ಬವನ್ನು ಶಾಂತಿ, ಸಂತೋಷವಾಗಿ ಆಚರಣೆ ಮಾಡಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಎಲ್ಲಾ ಧರ್ಮಗಳು ಶಾಂತಿ-ಸುವ್ಯವಸ್ಥೆ, ಅಹಿಂಸೆ, ಸಹಬಾಳ್ವೆ, ಸೌಹಾರ್ದ ಸೇರಿದಂತೆ ಒಳ್ಳೆ ಗುಣಗಳನ್ನು ಹೇಳುತ್ತವೆ. ಅಂತಹ ಒಳ್ಳೆ ಗುಣಗಳನ್ನು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಹೋದರೆ ನಮ್ಮ ಅಭಿವೃದ್ಧಿ ಜೊತೆಗೆ ಸಮಾಜನೂ ಅಭಿವೃದ್ಧಿ ಆಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ನಗರದ ಬಸವ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು, ಸಮಾಜದಲ್ಲಿ ಸಣ್ಣ ತಪ್ಪು ನಡೆದರೂ ಕೂಡಲೇ ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು, ಯಾರೂ ಸಹ ಕಾನೂನು ಉಲ್ಲಂಘನೆ ಮಾಡಬಾರದು ಎಂದು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಆನೇಕಲ್ ತಾಲೂಕಿನ ಎಲ್ಲಾ ಧರ್ಮಗಳ ಮುಖಂಡರ ಸಲಹೆ, ಸೂಚನೆಗಳನ್ನು ಪಡೆದುಕೊಂಡು ಪೊಲೀಸ್ ಭದ್ರತೆ ಯಾವ ರೀತಿ ಅಳವಡಿಸಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿದೆ ಎಂದರು.
ಬಕ್ರೀದ್ ಹಬ್ಬದಂದು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎರಡು ಕೆಎಸ್ಆರ್ ಪಿ ತುಕಡಿ, 200 ಮಂದಿ ಹೋಮ್ ಗಾರ್ಡ್ಸ್ ಸಿಬ್ಬಂದಿಯನ್ನ ಹೆಚ್ಚುವರಿಯಾಗಿ ನಿಯೋಜನೆ ಮಾಡಲಾಗುತ್ತದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ ಎಂದರು.
ಈ ವೇಳೆ ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿವೈಎಸ್ಪಿ ನಾಗರಾಜ್, ಗ್ರಾಮಾಂತರ ಜಿಲ್ಲೆಯ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…