ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನು ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಬೆಂ.ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.
ಬಕ್ರೀದ್ ಹಬ್ಬ ಪ್ರಯುಕ್ತ ಪೊಲೀಸ್ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ನಗರದ ಎಜಿಎಂ ಭವನದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.
ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಎಲ್ಲಾ ಸಮುದಾಯದವರ ಸಹಕಾರ ಅಗತ್ಯವಿದೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ಕೂಡಲೇ ನೀಡಬೇಕು ಎಂದು ತಿಳಿಸಿದರು.
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಜೊತೆಗೆ ಶಾಂತಿ ಭಂಗ ಮಾಡದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಾನೂನು ಉಲ್ಲಂಘಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಇಲಾಖೆಯಿಂದ ಸಂಪೂರ್ಣ ಬೆಂಬಲವಿದೆ ಎಂದರು.
112 ವಾಹನ, ರಾತ್ರಿಗಸ್ತುಗೆ ಪೊಲೀಸ್ ಸಿಬ್ಬಂದಿ ನಿಯೋಜನೆ, ಚೆಕ್ ಪೋಸ್ಟ್ ಗಳನ್ನು ಅಹ ಹಾಕಲಾಗಿದೆ. ಅದೇರೀತಿ ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣೀಡಲಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…