ಬಕ್ರೀದ್ ಹಬ್ಬವನ್ನು ಸೌಹಾರ್ದತೆ, ಸಹಬಾಳ್ವೆ, ಶಾಂತಿಯುತ ಆಚರಣೆಗೆ ಎಲ್ಲರ ಸಹಕಾರ ಅಗತ್ಯ- ಬೆಂ.ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ

ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನು ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ ಪ್ರಕರಣ  ದಾಖಲು ಮಾಡಲಾಗುತ್ತದೆ ಎಂದು ಬೆಂ.ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.

ಬಕ್ರೀದ್ ಹಬ್ಬ ಪ್ರಯುಕ್ತ ಪೊಲೀಸ್ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ನಗರದ ಎಜಿಎಂ ಭವನದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.

ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಎಲ್ಲಾ ಸಮುದಾಯದವರ ಸಹಕಾರ ಅಗತ್ಯವಿದೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ಕೂಡಲೇ ನೀಡಬೇಕು  ಎಂದು ತಿಳಿಸಿದರು.

ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಜೊತೆಗೆ ಶಾಂತಿ ಭಂಗ ಮಾಡದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಾನೂನು ಉಲ್ಲಂಘಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಇಲಾಖೆಯಿಂದ ಸಂಪೂರ್ಣ ಬೆಂಬಲವಿದೆ ಎಂದರು.

112 ವಾಹನ, ರಾತ್ರಿಗಸ್ತುಗೆ ಪೊಲೀಸ್ ಸಿಬ್ಬಂದಿ ನಿಯೋಜನೆ, ಚೆಕ್ ಪೋಸ್ಟ್ ಗಳನ್ನು ಅಹ ಹಾಕಲಾಗಿದೆ. ಅದೇರೀತಿ ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣೀಡಲಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ(ಅಪರಾಧ ವಿಭಾಗ) ನಾಗರಾಜು, ಡಿವೈಎಸ್‍ಪಿ ರವಿ, ನಗರ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಸೇರಿಂದತೆ ವಿವಿಧ ತಾಲೂಕುಗಳ ಪೊಲೀಸ್ ಇನ್ಸ್ ಪೆಕ್ಟರ್, ಸಬ್‍ಇನ್ಸ್ಪೆಕ್ಟರ್, ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಮುಸ್ಲಿಂ ಹಾಗೂ ಹಿಂದು ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

6 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

11 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago