Categories: ಕೋಲಾರ

ಬಜೆಟ್ ನಲ್ಲಿ ಕೆ.ಸಿ ವ್ಯಾಲಿ ಶುದ್ಧೀಕರಣ, ಸರ್ಕಾರಿ ಮೆಡಿಕಲ್, ಇಂಜಿನಿಯರ್ ಕಾಲೇಜಗಳ ಸ್ಥಾಪನೆಗೆ ಯಲುವಗುಳಿ ನಾಗರಾಜ್ ಒತ್ತಾಯ

ಕೋಲಾರ: ಜಿಲ್ಲೆಯ ಅಂತರ್ಜಲ ಹೆಚ್ಚಳಕ್ಕೆ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದ ಶುದ್ಧೀಕರಣ, ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಮತ್ತು ಇಂಜಿನಿಯರ್ ಕಾಲೇಜುಗಳ ಸ್ಥಾಪನೆಗೆ ಮುಂಬರಲಿರುವ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಸರ್ಕಾರವನ್ನು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು,

ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ ನಾಲೆಗಳು ಇಲ್ಲದ ಜಿಲ್ಲೆಯಾಗಿದೆ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾದ ಕಾರಣ ಇಲ್ಲಿನ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1,500 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದ ಅಂತರ್ಜಲವು ಪಾತಾಳಕ್ಕೆ ಕುಸಿದಿತ್ತು ಹಿಂದೆ ಸಿದ್ದರಾಮಯ್ಯ ಸರ್ಕಾರವು ಕೆ.ಸಿ ವ್ಯಾಲಿ ಯೋಜನೆಯ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಾರಿ ಮಾಡಿದ್ದ ಯೋಜನೆಗೆ ಮೂರನೇ ಹಂತದ ಶುದ್ದೀಕರಣ ಮಾಡಲು ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕೋಲಾರ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸರಕಾರಿ ವೈದ್ಯಕೀಯ ಮತ್ತು ಇಂಜಿನಿಯರ್ ಕಾಲೇಜುಗಳು ಸ್ಥಾಪನೆ ಕೇವಲ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆಗಷ್ಟೇ ಸೀಮಿತಗೊಂಡಿದೆ ಸರಕಾರಿ ಕಾಲೇಜುಗಳು ಆರಂಭಗೊಂಡರೆ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಗುತ್ತದೆ ಖಾಸಗಿ ಕಾಲೇಜುಗಳಲ್ಲಿನ ದುಬಾರಿ ಶುಲ್ಕ ಇರುವುದರಿಂದ ಜಿಲ್ಲೆಯ ಹಲವಾರು ಮಂದಿ ಪ್ರತಿಭಾನ್ವಿತ ಬಡಮಕ್ಕಳು ವೈದ್ಯಕೀಯ ಮತ್ತು ಇಂಜಿನಿಯರ್ ಶಿಕ್ಷಣದಿಂದಲೇ ವಂಚಿತವಾಗುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಗೆ ಕುಡಿಯುವ ನೀರಿಗಾಗಿ ಸುಮಾರು 16 ವರ್ಷಗಳ ಹಿಂದೆ ಪ್ರಾರಂಭವಾದ ಎತ್ತಿನಹೊಳೆ ಯೋಜನೆಯಿಂದ ನೀರು ಬರುವಂತೆ ಕ್ರಮ ವಹಿಸಬೇಕು ಕೋಲಾರ ನಗರದಲ್ಲಿನ ರಸ್ತೆಗಳ ವಿಸ್ತರಣೆ ಹಾಗೂ ರಿಂಗ್ ರಸ್ತೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಜೊತೆಗೆ ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶಾಸಕರೊಬ್ಬರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…

12 minutes ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

4 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

6 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

7 hours ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

8 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

12 hours ago