1. ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
2. ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.
3. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.
4. 3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.
5. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.
6. ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…