ಬೆಂಗಳೂರಿನ ರಾಜಾಜಿನಗರ ಮೆಟ್ರೊ ಸ್ಟೇಷನ್ ನಲ್ಲಿ ರೈತನೊಬ್ಬನ ಬಟ್ಟೆ ಗಲೀಜಾಗಿದೆ ಎಂದು ಅವರನ್ನಾ ಮೆಟ್ರೋ ಒಳಗಡೆ ಬಿಡದೇ ಸಿಬ್ಬಂದಿ ಅಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಇದು ಎರಡು ದಿನಗಳ ಹಿಂದೆ ನಡೆದ ಈ ಘಟನೆ ಈಗ ಫುಲ್ ವೈರಲ್ ಆಗುತ್ತಿದೆ.
ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಇದಕ್ಕೆ ಪ್ರತಿಕ್ರಿಯಿಸಿದ ನಮ್ಮ ಮೆಟ್ರೋ, ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದೆ.