ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.
ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…