ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ನೆಸ್ಟ್ ಟೀ ಶಾಪ್ ನಲ್ಲಿ ನಡೆದಿದೆ…

ರಾತ್ರಿ ವೇಳೆ ಟೀ ಅಂಗಡಿ ತೆಗೆದಿದ್ದ ಕಾರಣ ಟೀ ಅಂಗಡಿ ಯುವಕನ ಮೇಲೆ ದೇವನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾಕೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ..

‘ಬೇಡ ಬಿಟ್ಬಿಡಿ ಸಾರ್’ ಅಂದ್ರು ಅಂಗಡಿಯಿಂದ ಎಳೆದುಕೊಂಡು ಲಾಟಿಯಿಂದ ಹೊಡೆದು ದರ್ಪ ಮೆರೆದಿದ್ದಾರೆ.. ‘ನನಗೇ ಹೊಡಿಬೇಡಿ ಅಂತೀಯ’ ಎಂದು ಮನಸ್ಸೋ ಇಚ್ಛೆ ಇನ್ಸಪೆಕ್ಟರ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ..

ಕೆಲ ತಿಂಗಳ ಹಿಂದೆ ನಡೆಸಿರುವ ದೌರ್ಜನ್ಯದ ವಿಡಿಯೋ ಈಗ ವೈರಲ್ ಆಗುತ್ತಿದೆ..

ಹಲ್ಲೆಗೊಳಗಾದ ಹುಡುಗ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಟೀ ಅಂಗಡಿ ಓಪನ್ ಮಾಡಿದ್ದ.

ಬರುವ ಗ್ರಾಹಕರಿಗೆ ಟೀ ಮಾಡಿಕೊಡಲು ಪೂರ್ವಸಿದ್ಧತೆ ನಡೆಸುತ್ತಿದ್ದ. ಈಗಿರುವಾಗ ಯಾವುದೇ ಕಾರಣ ನೀಡದೆ ಏಕಾಏಕಿ ಬಂದು ಹುಡುಗನ ಮೇಲೆ ಇನ್ಸ್ ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ..

ಇನ್ಸಪೆಕ್ಟರ್ ರಾಕೇಶ್ ಮತ್ತು ಇನ್ನಿತರ ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯ ಆರೋಪ ಕೇಳಿಬಂದಿದೆ..

ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ..

ದೌರ್ಜನ್ಯ ನಡೆಸಿದವರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ..

Ramesh Babu

Journalist

Recent Posts

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

8 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

8 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

9 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

20 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

2 days ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

2 days ago