ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ-ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಕುರಿತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರ ಬಳಿ ಚರ್ಚಿಸಲು ಸಮಯಾವಕಾಶ ಕೇಳಿದ್ದೇವೆ. ಆದರೆ ಇನ್ನೂ ಸಮಯಾವಕಾಶ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿಕಾರಿದರು.

ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಬಡವರಿಗೆ ನೀಡಬೇಕು ಎಂಬ ಮನಸ್ಥಿತಿ ಕೇಂದ್ರ ನಾಯಕರಿಗಿಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ನಮ್ಮದೇ ಆದ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಜುಲೈ 1ಕ್ಕೆ ಅಕ್ಕಿ ಕೊಡುವುದಕ್ಕೆ ಆಗದಿರಬಹುದು, ಆದರೆ ಆಗಸ್ಟ್ 1ರ ಮೊದಲು ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದರು.

Leave a Reply

Your email address will not be published. Required fields are marked *