Categories: ಕೋಲಾರ

ಬಡವರಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ: ಜೆಡಿಎಸ್‌ ಮುಖಂಡ ಸಿ.ಎಂ.ಆರ್ ಶ್ರೀನಾಥ್

ಕೋಲಾರ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು

ತಾಲೂಕಿನ ಕ್ಯಾಲನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಸಿಎಂಆರ್ ಶ್ರೀನಾಥ್ ಫೌಂಡೇಶನ್ ಹಾಗೂ ಆರ್.ಎಲ್ ಜಾಲಪ್ಪ ಆಸ್ಪತ್ರೆ ವತಿಯಿಂದ ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ರೋಗಗಳು ಬರುವ ಮುಂಚೆ ಎಚ್ಚರ ವಹಿಸಿದರೆ ಮಾತ್ರವೇ ಉತ್ತಮ ಆರೋಗ್ಯವನ್ನು ಕಾಪಾಡುವ ಜೊತೆಗೆ ಆಸ್ಪತ್ರೆಗೆ ಹೋಗುವುದು ಮತ್ತು ಚಿಕಿತ್ಸೆಯಿಂದ  ದೂರ ಇರಲು ಸಾಧ್ಯವಾಗುತ್ತದೆ ಎಂದರು.

ಚಿಕ್ಕ ಮಕ್ಕಳಿಂದ ಹಿರಿಯ ರವರೆಗೂ ಆರೋಗ್ಯವಾಗಿದ್ದರೆ, ಸುಖವಾಗಿ ಜೀವನ ನಡೆಸಲು ಸಾಧ್ಯ ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣಗಳು ಬರುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಬೇಕು ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಾ ಇದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಇವತ್ತಿನ ಕಾರ್ಪೊರೇಟ್ ಯುಗದಲ್ಲಿ ಮನುಷ್ಯನಿಗೆ ಆರೋಗ್ಯ ಮತ್ತು ಶಿಕ್ಷಣ ಎಂಬುದು ಬಡವರಿಗೆ ದೂರದ ಮಾತಾಗಿದೆ ಇಂತಹ ಸಂದರ್ಭದಲ್ಲಿ ಬಡವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ ಸುಮಾರು 500 ಕ್ಕೂ ಹೆಚ್ಚು ರೋಗಿಗಳು ವಿವಿಧ ರೀತಿಯ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಕ್ಯಾಲನೂರು ಗ್ರಾಪಂ ಅಧ್ಯಕ್ಷ ರಮೇಶ್, ಸದಸ್ಯ ಲೋಕೇಶ್, ರೋಟರಿ ಸುಧಾಕರ್, ಬಲಿಜ ಸಂಘದ  ಅಶೋಕ್, ಮುಖಂಡರಾದ ಅಮ್ಮನಲ್ಲೂರು ರಮೇಶ್, ರಾಮಣ್ಣ, ನರಸಿಂಹಪ್ಪ, ಬೈರಾಂಡಹಳ್ಳಿ ವೆಂಕಟೇಶ್, ಪ್ರಕಾಶ್, ನಾಗೇಶ್, ಬಾಬಾ ಸಾಬ್, ಬಿಎಸ್ಎನ್ಎಲ್ ವೆಂಕಟೇಶ್, ಪ್ರಮುಖ ವೈದ್ಯರಾದ ಪ್ರದೀಪ್, ಸುನಿಲ್, ಪ್ರಸನ್ನ ಮುಂತಾದವರು ಇದ್ದರು

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

1 hour ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

5 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

6 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

13 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

14 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

15 hours ago