ಬದುಕಿನಲ್ಲಿ ಸತ್ವಯುತವಾದ ತತ್ವಗಳನ್ನು ಅಳವಡಿಸಿಕೊಳ್ಳಿ- ಆರ್.ಕೆ.ಬಾಲಚಂದ್ರ

ರುಡ್‌ಸೆಟ್ ಸಂಸ್ಥೆಯಲ್ಲಿ ಕೌಶಲ್ಯ, ಉದ್ಯಮಶೀಲತಾ ಅಭಿವೃದ್ಧಿ ಕುರಿತು ತರಬೇತಿ ಪಡೆದು ಸ್ವ ಉದ್ಯೋಗಿಗಳಾಗುವುದು ಮಾತ್ರವಲ್ಲದೆ, ಸಂಸ್ಥೆಯಲ್ಲಿ ಕಲಿತ ವಿಚಾರಗಳ ಪೈಕಿ ಬದುಕಿನಲ್ಲಿ ಸತ್ವಯುತವಾದ ತತ್ವಗಳನ್ನು ಅಳವಡಿಕೊಳ್ಳಬೇಕೆಂದು ರಾಷ್ಟ್ರಮಟ್ಟದ ಮಾನವ ಸಂಪನ್ಮೂಲ ತರಬೇತುದಾರರಾದ ಆರ್.ಕೆ.ಬಾಲಚಂದ್ರ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವನ ಎಂಬುದು ಹುಡುಗಾಟವಲ್ಲ ಅದೊಂದು ನಿರಂತರ ಹುಡುಕಾಟ ಎಂದ ಅವರು ತಾಳ್ಮೆ ಮತ್ತು ದುಡಿಮೆಯ ಮೂಲಕ ಪ್ರತಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂಬ ಕಿವಿಮಾತು ಹೇಳಿದರು.

ಬದುಕು ಅವಶ್ಯಕತೆಗಳೊಂದಿಗೆ ನಡೆಯುತ್ತಿದ್ದು, ಸದೃಢವಾದ ಗುರಿಯನ್ನಿಟ್ಟುಕೊಂಡು ಸನ್ಮಾರ್ಗದಲ್ಲಿ ನಡೆಯಿರಿ ಎಂದರಲ್ಲದೆ, ಸಮಾಜವು ಪ್ರತಿದಿನವೂ ಹೊಸದೊಂದು ಅವಕಾಶ ತೆರೆದಿಡುತ್ತಲೆ ಇರುತ್ತದೆ, ಅವಕಾಶವನ್ನು ಗುರುತಿಸಿ ಸದ್ಬಳಕೆ ಮಾಡಿಕೊಳ್ಳುವ ಜಾಣ್ಮೆ ನಮ್ಮಲ್ಲಿರಬೇಕೆಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಮೌಲ್ಯಮಾಪಕರಾದ ನಾಗರಾಜ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

6 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

18 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago