ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ ಸೂಚನೆ ಮೇರೆಗೆ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರು ಹೇಳಿದರು.
ನಾವು ಬಮೂಲ್ ಚುನಾವಣೆ ಗೆಲ್ಲುವುದು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನ ಉಳಿವು-ಅಳಿವು ಸಂಗತಿಯಾಗಿದೆ. ಆದ್ಧರಿಂದ ಜೆಡಿಎಸ್ ಪಕ್ಷದ ಎಲ್ಲಾ ಡೈರಿ ಅಧ್ಯಕ್ಷರುಗಳು ನನಗೆ ಮತ ಹಾಕುವುದರ ಮೂಲಕ ಜೆಡಿಎಸ್ ನ್ನು ದೊಡ್ಡಬಳ್ಳಾಪುರದಲ್ಲಿ ಇನ್ನಷ್ಟು ಪ್ರಬಲವಾಗಿಸಬೇಕು ಎಂದು ಕೋರಿದರು.
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಈ ಮೂರು ಪಕ್ಷದವರು ಸೇರಿ ಪಕ್ಷಾತೀತವಾಗಿ ನನಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ. ಬಮೂಲ್ ರೈತ ಸಮುದಾಯದ ಸಂಸ್ಥೆ, ಇದಕ್ಕೆ ಪಕ್ಷ ಬರುವುದಿಲ್ಲ. ಬಮೂಲ್ ಚುನಾವಣೆ ರೈತರಿಗಾಗಿ ನಡೆಯುವ ಚುನಾವಣೆ ಆದ್ದರಿಂದ ಪಕ್ಷ ಭೇದ ಮರೆತು ರೈತರ ಬಗ್ಗೆ ಕಾಳಜಿ ವಹಿಸುವವರಿಗೆ ಮತ ನೀಡಿ ಎಂದು ಕೋರಿದರು.
ಜೆಡಿಎಸ್ ನ 88 ಮಂದಿ ಡೈರಿ ಅಧ್ಯಕ್ಷರಿದ್ದಾರೆ. ಕಾಂಗ್ರೆಸ್ ನ 55 ಮಂದಿ ಇದ್ದಾರೆ. ಬಿಜೆಪಿಯ 52 ಇದ್ದಾರೆ. ಇವರೆಲ್ಲಾರು ನನಗೆ ಮತ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.
ಬಿಜೆಪಿಯ ಬಿ.ಸಿ ಆನಂದ್ ವಾಮಮಾರ್ಗದಿಂದ ಬಿಜೆಪಿ ಸೇರ್ಪಡೆಗೊಂಡಿರುವುದೇ ಹೊರೆತು ಬಿಜೆಪಿಯಿಂದ ಗೆದ್ದಿಲ್ಲ. ಹಿಂದೆ ಮೂರು ಪಕ್ಷದ ಸಹಕಾರದಿಂದ ಗೆದ್ದಿದ್ದರು. ಸಹಕಾರ ನೀಡಿ ಗೆಲ್ಲಿಸಿರುವವರಿಗೆ ಏನೇನು ಸಹಾಯ ಮಾಡಿದ್ದಾರೆ ಎಂಬುದಕ್ಕೆ ಅವರೇ ಉತ್ತರ ಕೊಡಬೇಕು. ಒಂದು ವೇಳೆ ನಾನು ಗೆದ್ದರೆ ನನ್ನ ಕೈಹಿಡಿದವರನ್ನ ಕೈ ಬಿಡುವುದಿಲ್ಲ. ರೈತರಪರ ಕೆಲಸ ಮಾಡುತ್ತೇನೆ ಎಂದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…