ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದ್ದು,
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಕಣ್ಣು ನೆಟ್ಟಿದ್ದು, ಚರ್ಚೆ ತೀವ್ರಗೊಂಡಿದೆ.
ಈ ಕುರಿತಾಗಿ “ಪಬ್ಲಿಕ್ ಮಿರ್ಚಿ” ಯೊಂದಿಗೆ ದೊಡ್ಡಬಳ್ಳಾಪುರ ಯೋಜನಾ ಆಯೋಗದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಎಲ್ಲಾ ಪಕ್ಷದಿಂದ ಐದೈದು ಮಂದಿ ಗೆದ್ದಿದ್ದಾರೆ. ಯಾರು ಅನ್ಯಾವಾಗದೇ 20ತಿಂಗಳಂತೆ ಒಬ್ಬೊಬ್ಬರು ಅಧಿಕಾರವನ್ನು ಹಂಚಿಕೊಂಡು ಸಹಕಾರದಿಂದ ಇರೋಣ ಎಂದು ಮಾತನಾಡಿಕೊಂಡಿದ್ದೇವೆ. ಈ ನಿರ್ಧಾರವನ್ನು ಯಾರೂ ಒಪ್ಪದ ಪಕ್ಷದಲ್ಲಿ ನಾವು ಬೇರೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಶತಾಯಗತಾಯ ಪಿಎಲ್ ಡಿ ಬ್ಯಾಂಕ್ ಗೆ ಕಾಂಗ್ರೆಸ್ ನಿಂದಲೇ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು.
ಬಮೂಲ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್, ರಾಮಣ್ಣ, ಕಲ್ಲುದೇವನಹಳ್ಳಿ ಮರೀಗೌಡ, ಸಕ್ಕರೆಗೊಲ್ಲಹಳ್ಳಿ ರುದ್ರಮೂರ್ತಿ, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡರೆ ಹುಸ್ಕೂರ್ ಆನಂದ್ ಆಕಾಂಕ್ಷಿಗಳಾಗಿದ್ದರೆ. ಈ ಹಿನ್ನೆಲೆ ಇದೇ ಭಾನುವಾರ ಸಭೆ ಕರೆದಿದ್ದೇವೆ. ಅಂದು ಒಬ್ಬರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತೇವೆ. ಜೆಡಿಎಸ್ ಪಕ್ಷದವರು ಬಿಜೆಪಿ ಜೊತೆ ಬಿಟ್ಟು ನಮ್ಮ ಕಾಂಗ್ರೆಸ್ ಜೊತೆ ಬಂದು ಮೈತ್ರಿ ಮಾಡಿಕೊಳ್ಳುವುದಕ್ಕೆ ಬಂದರೆ ನಾವು ಸ್ವಾಗತಿಸುತ್ತೇವೆ ಎಂದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…