ಬಮೂಲ್ ಫಲಿತಾಂಶ: ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ- ನನಗೆ ಹಿತ, ಒಳ ಶತ್ರುಗಳ ಕಾಟ ಹೆಚ್ಚಾಗಿತ್ತು- ಕೊನೆಗೆ ಪ್ರಮಾಣಿಕತೆ, ಸತ್ಯ ಗೆದ್ದಿದೆ- ಬಿ.ಸಿ.ಆನಂದ್

ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಿ.ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಹಿಂದೆ-ಮುಂದೆ ಮಾತಾಡುವ ಶತ್ರುಗಳು ಸೇರಿದಂತೆ ಇತರರು ನನ್ನನ್ನು ಸೋಲಿಸಲು ಎಷ್ಟೇ ಕುತಂತ್ರ, ಷಡ್ಯಂತ್ರ ಮಾಡಿದ್ರೂ ಸಹ ಪ್ರಮಾಣಿಕತೆ, ಸತ್ಯ ಗೆದ್ದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಬಮೂಲ್ ಚುನಾವಣೆ ಗೆದ್ದ ಬಳಿಕ ಮೊದಲ ಬಾರಿಗೆ ಬಿ.ಸಿ ಆನಂದ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಗೆಲುವು ಸಾಧಿಸುವುದಕ್ಕೆ ಶಾಸಕ ಧೀರಜ್ ಮುನಿರಾಜ್ ಸಾರಥ್ಯ ವಹಿಸಿದ್ದರು.‌ ಈ ಚುನಾವಣೆ ಸಾವು-ಬದುಕಿನ ನಡುವೆ ನಡೆದಂತಹ ಚುನಾವಣೆ, ನನಗೆ ಹಿತ ಶತ್ರುಗಳ ಕಾಟ ಹೆಚ್ಚಾಗಿತ್ತು. ನನ್ನ ಈ ಗೆಲುವಿಗೆ ಕಾರಣರಾದ ಡೈರಿ ಅಧ್ಯಕ್ಷರುಗಳು, ಹಾಲು ಉತ್ಪಾದಕರಿಗೆ, ಕಾರ್ಯದರ್ಶಿಗಳಿಗೆ ಸ್ನೇಹಿತರಿಗೆ ಧನ್ಯವಾದಗಳು, ನಾನು ಕಾಯಾ,ವಾಚಾ, ಮನಸಾ ಕೆಲಸ ಮಾಡಿ ರೈತರ‌ಪರ ನಿಂತು ರೈತನ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದರು.

ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ..

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

9 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

10 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

13 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

15 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

20 hours ago