ಬಯಲುಸೀಮೆ ಜನರ ಬಹುಕಾಲದ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯನ್ನು ಮುಂದಿನ 5 ವರ್ಷಗಳಲ್ಲಿ ಜಾರಿ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಹೇಳಿದರು.
ಮಧುರೆ ಹೋಬಳಿ ಕನಸವಾಡಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಎನ್ ಡಿಎ ಮೈತ್ರಿಕೂಟ 400 ಸೀಟುಗಳನ್ನ ಗೆಲ್ಲಲಿದೆ. ಮೂರನೇ ಬಾರಿ ಮೋದಿ ಅವರು ಪ್ರಧಾನಿ ಆಗಲಿದ್ದಾರೆ. ನನಗೆ ಆರ್ಶೀವಾದ ಮಾಡಿದರೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವೆ. ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ತರುವೆ, ಪ್ರತಿಯೊಬ್ಬ ರೈತನ ಏಳಿಗೆಗೆ ಶ್ರಮಿಸುತ್ತೇನೆ ಎಂದರು.
ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದವರು ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ದೂರಿದರು.
ಬರದ ಈ ಸಂದರ್ಭದಲ್ಲಿ ಜಿಲ್ಲೆಯ ಜನರು ಸ್ಮರಿಸುವಂತಹ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದರು. ಇಂತಹ ಕೆಲಸಗಳನ್ನು ನೋಡಿ ರಾಜ್ಯದ ಮತದಾರರು ಚಿಕ್ಕಾಬಳ್ಳಾಪುರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ನಂತರ ವಿರೋಧ ಪಕ್ಷದ ನಾಯಕ ಆ.ಅಶೋಕ್ ಮಾತನಾಡಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರ್ಶೀವಾದದ ಅಭ್ಯರ್ಥಿ, ನಿಮ್ಮ ಮತ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದಕ್ಕೆ ಸಹಕಾರ ಆಗಲಿದೆ. ದೇಶದ ಸುಭದ್ರತೆಗೆ, ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದಕ್ಕೆ ಸುಧಾಕರ್ ಅವರಿಗೆ ಮತ ನೀಡಿ ಎಂದು ತಿಳಿಸಿದರು.
ಸುಧಾಕರ್ ಅವರು ಮೋದಿಯವರ ಪ್ರತಿನಿಧಿ, ಆದ್ದರಿಂದ ಸುಧಾಕರ್ ಅವರು ಮೂರು ಲಕ್ಷ ಮತಗಳ ಅಂತರಿಂದ ಗೆಲ್ಲಿಸಬೇಕು. ಚಿಕ್ಕಬಳ್ಳಾಪುರದಲ್ಲಿ ನಾಡಪ್ರಭು ಕೆಂಪೇಗೌಡರ ಆಡಳಿತಕ್ಕೆ ಅನುವು ಮಾಡಿಕೊಡಬೇಕು ಎಂದರು.
ಕಾಂಗ್ರೆಸ್ ನವರು ದೇಶದಲ್ಲಿ 5೦ ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ದೇಶಕ್ಕೆ ಕಾಂಗ್ರೆಸ್ ನಿಂದ ಕೊಡುಗೆ ಶೂನ್ಯ, ಮೋದಿಯವರು ತಮ್ಮ ಕುಟುಂಬಕ್ಕೆ ಏನು ಮಾಡಿಲ್ಲ. ದೇಶಕ್ಕೆ ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಇದೂವರೆಗೆ ಯಾವ ಭ್ರಷ್ಟಾಚಾರ ಮಾಡಿಲ್ಲ ಎಂದರು.
ಏನಿಲ್ಲ, ಏನಿಲ್ಲ ನೀರಿಲ್ಲ ನೀರಿಲ್ಲ, ಏನಿಲ್ಲ ಏನಿಲ್ಲ ಕರೆಂಟ್ ಇಲ್ಲ ಕರೆಂಟ್ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.
ಲೋಕಸಭಾ ಚುನಾವಣೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನವಣೆ ಅಲ್ಲ, ಈ ದೇಶದ ಚುನಾವಣೆ ನೆನಪಿನಲ್ಲಿಟ್ಟುಕೊಳ್ಳಿ, ಗ್ಯಾರಂಟಿ ಯೋಜನೆಗಳ ಹೆಸರೇಳಿ ವೋಟ್ ಕೇಳಬೇಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಹತ್ತು ವರ್ಷಗಳಿಂದ ಸುಭದ್ರ ಸರ್ಕಾರ ನಡೆಸುತ್ತಿರುವ ಪ್ರಧಾನಿ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಆಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ, ಕುಡಿಯುವ ನೀರನ್ನು ತರಲು ಎನ್ ಡಿಎ ಅಭ್ಯರ್ಥಿಯನ್ನ ಗೆಲ್ಲಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ರಾಜ್ಯದಲ್ಲಿ ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ಇದೂವರೆಗೂ ರಾಜ್ಯದಲ್ಲಿ ಯಾವ ಅಭಿವೃದ್ಧಿಯಾಗಿಲ್ಲ ಎಂದು ಕಿಡಿಕಾರಿದರು.
ಈ ವೇಳೆ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ಬೆಂ.ಗ್ರಾ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಜೆಡಿಎಸ್ ಹಿರಿಯ ಮುಖಂಡ ಅಪ್ಪಯ್ಯ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…