ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ: ಇದು ಬಿಜೆಪಿ-ಜೆಡಿಎಸ್ ವಾಗ್ದಾನ- ಡಾ.ಕೆ.ಸುಧಾಕರ್ ಹೇಳಿಕೆ

ಬಯಲುಸೀಮೆ ಜನರ ಬಹುಕಾಲದ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯನ್ನು ಮುಂದಿನ 5 ವರ್ಷಗಳಲ್ಲಿ ಜಾರಿ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಹೇಳಿದರು.

ಮಧುರೆ ಹೋಬಳಿ ಕನಸವಾಡಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಎನ್ ಡಿಎ ಮೈತ್ರಿಕೂಟ 400 ಸೀಟುಗಳನ್ನ ಗೆಲ್ಲಲಿದೆ. ಮೂರನೇ ಬಾರಿ ಮೋದಿ ಅವರು ಪ್ರಧಾನಿ ಆಗಲಿದ್ದಾರೆ. ನನಗೆ ಆರ್ಶೀವಾದ ಮಾಡಿದರೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವೆ. ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ತರುವೆ, ಪ್ರತಿಯೊಬ್ಬ ರೈತನ ಏಳಿಗೆಗೆ ಶ್ರಮಿಸುತ್ತೇನೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ , ಬಡ ಮಕ್ಕಳ ಸ್ಕಾಲರ್ ಶಿಪ್ ನ ಹಣ ಕಿತ್ತುಕೊಂಡಿದೆ. ಅದೇರೀತಿ ರೈತ ವಿರೋಧಿ ಸರ್ಕಾರ ಕೂಡ ಹೌದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದವರು ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ದೂರಿದರು.

ಬರದ ಈ ಸಂದರ್ಭದಲ್ಲಿ ಜಿಲ್ಲೆಯ ಜನರು ಸ್ಮರಿಸುವಂತಹ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದರು. ಇಂತಹ ಕೆಲಸಗಳನ್ನು ನೋಡಿ ರಾಜ್ಯದ ಮತದಾರರು ಚಿಕ್ಕಾಬಳ್ಳಾಪುರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ನಂತರ ವಿರೋಧ ಪಕ್ಷದ‌ ನಾಯಕ ಆ.ಅಶೋಕ್ ಮಾತನಾಡಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರ್ಶೀವಾದದ ಅಭ್ಯರ್ಥಿ‌, ನಿಮ್ಮ ಮತ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದಕ್ಕೆ ಸಹಕಾರ ಆಗಲಿದೆ. ದೇಶದ ಸುಭದ್ರತೆಗೆ, ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದಕ್ಕೆ ಸುಧಾಕರ್ ಅವರಿಗೆ ಮತ ನೀಡಿ ಎಂದು ತಿಳಿಸಿದರು.

ನರೇಂದ್ರ ಮೋದಿ ಅವರು ಈ ದೇಶದ ಕಾವಲುಗಾರ, ಮೋದಿ ಅವರು ದೇಶದ ಪ್ರಧಾನಿ ಆದ‌ ಮೇಲೆ ಪಾಕಿಸ್ತಾನ ನಮ್ಮ ದೇಶದ ಮೇಲೆ ಮಾಡುತ್ತಿದ್ದ ಸದ್ದನ್ನು ಅಡಗಿಸಿದ್ದಾರೆ.

ಸುಧಾಕರ್ ಅವರು ಮೋದಿಯವರ ಪ್ರತಿನಿಧಿ, ಆದ್ದರಿಂದ ಸುಧಾಕರ್ ಅವರು ಮೂರು ಲಕ್ಷ ಮತಗಳ ಅಂತರಿಂದ ಗೆಲ್ಲಿಸಬೇಕು. ಚಿಕ್ಕಬಳ್ಳಾಪುರದಲ್ಲಿ‌ ನಾಡಪ್ರಭು ಕೆಂಪೇಗೌಡರ ಆಡಳಿತಕ್ಕೆ ಅನುವು ಮಾಡಿಕೊಡಬೇಕು ಎಂದರು.

ಕಾಂಗ್ರೆಸ್ ನವರು ದೇಶದಲ್ಲಿ 5೦ ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ದೇಶಕ್ಕೆ ಕಾಂಗ್ರೆಸ್ ನಿಂದ ಕೊಡುಗೆ ಶೂನ್ಯ, ಮೋದಿಯವರು ತಮ್ಮ ಕುಟುಂಬಕ್ಕೆ ಏನು ಮಾಡಿಲ್ಲ. ದೇಶಕ್ಕೆ ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಇದೂವರೆಗೆ ಯಾವ ಭ್ರಷ್ಟಾಚಾರ ಮಾಡಿಲ್ಲ ಎಂದರು.

ಏನಿಲ್ಲ, ಏನಿಲ್ಲ ನೀರಿಲ್ಲ ನೀರಿಲ್ಲ, ಏನಿಲ್ಲ ಏನಿಲ್ಲ ಕರೆಂಟ್ ಇಲ್ಲ ಕರೆಂಟ್ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಸಿಎಂ ಸಿದ್ದರಾಮಯ್ಯನವರು ರೈತರ ಕಷ್ಟ‌ಗಳನ್ನ ಆಲಿಸಿ‌ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರೇಳಿ ಯೋಜನೆಗಳ ಅನುದಾನ ಕಡಿತ ಮಾಡಿದ್ದಾರೆ. ಇದೂವೆರೆಗೆ ಬರ ಪರಿಹಾರ ಬಿಡುಗಡೆ ಮಾಡಿಲ್ಲ, ರಾಜ್ಯದಲ್ಲಿ ಡ್ರಾಮಾ ಕಂಪನಿ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಗುಡುಗಿದರು.

ಲೋಕಸಭಾ ಚುನಾವಣೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನವಣೆ ಅಲ್ಲ, ಈ ದೇಶದ ಚುನಾವಣೆ ನೆನಪಿನಲ್ಲಿಟ್ಟುಕೊಳ್ಳಿ, ಗ್ಯಾರಂಟಿ ಯೋಜನೆಗಳ ಹೆಸರೇಳಿ ವೋಟ್ ಕೇಳಬೇಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಹತ್ತು ವರ್ಷಗಳಿಂದ ಸುಭದ್ರ ಸರ್ಕಾರ ನಡೆಸುತ್ತಿರುವ ಪ್ರಧಾನಿ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಆಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ, ಕುಡಿಯುವ ನೀರನ್ನು ತರಲು ಎನ್ ಡಿಎ ಅಭ್ಯರ್ಥಿಯನ್ನ ಗೆಲ್ಲಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ದೊಡ್ಡಬಳ್ಳಾಪುರ‌ ವಿಧಾನಸಭಾ ಕ್ಷೇತ್ರದಿಂದ ಸುಮಾರು ಒಂದೂವರೆ ಲಕ್ಷ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ನೀಡಬೇಕು. ಈ ನಿಟ್ಟಿನಲ್ಲಿ ಮುಖಂಡರು, ಕಾರ್ಯಕರ್ತರು ಕೆಲಸ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ‌ ಮೂಡಿಸಿ ಮತದಾರರ ಮನವೊಲಿಸಿ‌ ಮತ ಪಡೆಯುವಲ್ಲಿ ಯಶಸ್ವಿಯಾಗಬೇಕು ಎಂದರು.

ರಾಜ್ಯದಲ್ಲಿ ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ಇದೂವರೆಗೂ ರಾಜ್ಯದಲ್ಲಿ ಯಾವ ಅಭಿವೃದ್ಧಿಯಾಗಿಲ್ಲ ಎಂದು ಕಿಡಿಕಾರಿದರು.

ಈ ವೇಳೆ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಶಾಸಕ ‌ನಿಸರ್ಗ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ಬೆಂ.ಗ್ರಾ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಜೆಡಿಎಸ್ ಹಿರಿಯ ಮುಖಂಡ ಅಪ್ಪಯ್ಯ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago