ಬಯಲು ಶೌಚಾಲಯವಾದ ಅಂಗನವಾಡಿ ಶಾಲಾ ಆವರಣ: ದುರ್ವಾಸನೆಯಲ್ಲಿ ಮಕ್ಕಳಿಗೆ ಆಟ-ಪಾಠ

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಬಯಲು ಶೌಚಾಲಯವನ್ನಾಗಿಸಿಕೊಂಡು ದಿನನಿತ್ಯ ಮೂತ್ರ ವಿಸರ್ಜನೆ ಮಾಡುತ್ತಿರುವ ಸಾರ್ವಜನಿಕರು.

ತಾಲೂಕು ಕಚೇರಿಗೆ ಪ್ರತಿದಿನ ನೂರಾರು ಮಂದಿ ಕೆಲಸ ಕಾರ್ಯಕ್ಕೆ ಬರುತ್ತಾರೆ. ಸಾರ್ವಜನಿಕರಿಗೆಂದೇ ಕಚೇರಿ ಪಕ್ಕದಲ್ಲೇ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳದ ಸಾರ್ವಜನಿಕರು ಹಾಗೂ ಸ್ಥಳೀಯರು ಕಚೇರಿ ಆವರಣದಲ್ಲಿ ಇರುವ ಅಂಗನವಾಡಿ ಕೇಂದ್ರದ ಪಕ್ಕದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡಿ ಮಲಿನಗೊಳಿಸುತ್ತಾರೆ ಎಂಬ‌ ಆರೋಪ ಕೇಳಿ ಬರುತ್ತಿದೆ.

ಈ ಕುರಿತು ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ಚಿನ್ನಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಟ್ಟದ ಸುತ್ತಲೂ ಇಲ್ಲಿನ ಸ್ಥಳೀಯರು ಬೆಳ್ಳಂ ಬೆಳಗ್ಗೆ ಮತ್ತು ಸಂಜೆ ವೇಳೆ ಬಂದು ಗಲೀಜು ಮಾಡಿ ಹೋಗುತ್ತಿದ್ದಾರೆ,

ನಮ್ಮ ಅಂಗನವಾಡಿಯಲ್ಲಿ 17 ರಿಂದ 20 ಮಕ್ಕಳಿದ್ದು, ಮಕ್ಕಳ ಅಡುಗೆ ಮತ್ತು ಶೌಚಾಲಯಕ್ಕಾಗಿ ಪಕ್ಕದಲ್ಲೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ನೀರಿನ ಸಂಪರ್ಕವನ್ನು ಪೈಪ್ ಮುಖಾಂತರ ನಮ್ಮ ಅಂಗನವಾಡಿ ಮತ್ತು ಶಾಲಾ ಕಾಂಪೌಂಡ್ ನಡುವೆ ಹಾಕಿಸಿಕೊಳ್ಳಲಾಗಿದೆ.

ಆದರೆ ಇದೇ ನಲ್ಲಿಯನ್ನು ಜನರು ಬಯಲು ಶೌಚಾಲಕ್ಕೆ ಹೋದ ಬಳಿಕ ಇಲ್ಲಿಯ ನಲ್ಲಿಯ ನೀರನ್ನು ಬಳಸುತ್ತಾರೆ. ಅಂಗನವಾಡಿ ಆವರಣವನ್ನು ಗಬ್ಬುನಾರುವಂತೆ ಮಾಡುತ್ತಿದ್ದಾರೆ, ನಿತ್ಯ ಅಂಗನವಾಡಿಯಲ್ಲಿ ಮಕ್ಕಳೊಂದಿಗೆ ಮೂಗು ಮುಚ್ಚಿಕೊಂಡು ಒರುವಂತ ಪರಿಸ್ಥಿತಿ ನಿರ್ಮಾಣವಗಿದೆ. ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಭಯದ ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ಹೇಳಿದರು.

ಶಾಲಾ ಆವರಣವನ್ನು ಸ್ವಚ್ಚವಾಗಿಡುವಂತೆ ಅನೇಕ ಬಾರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿದ್ದರೂ ಪೌರಾಯುಕ್ತರಾಗಲಿ ಅಥವಾ ನಗರಸಭಾ ಸಿಬ್ಬಂದಿಯಾಗಲಿ ಮನವಿಗೆ ಸ್ಪಂದಿಸಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಆರೋಪಿಸುತ್ತಿದ್ದಾರೆ.

ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಇನ್ನಾದರೂ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಳ್ಳುತ್ತಿದ್ದಾರೆ.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

43 minutes ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

21 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

22 hours ago