ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.
ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ 8 ಸಾವಿರ ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ ನೀರನ್ನು ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.
2022ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…