ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ. ನೀವು ಜನ ಜಾನವಾರುಗಳಿಗೆ ಯಾವುದಕ್ಕೂ ತೊಂದರೆ ಆಗದಂತೆ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಪಶು ಸಂಗೋಪನೆ, ಕೃಷಿ ಇಲಾಖೆಗಳ ಪ್ರಗತಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ತಿಳಿಸಿದರು.
DC, CEO, ಕಾರ್ಯದರ್ಶಿಗಳ ಸಭೆಯಲ್ಲಿ ನಾನು ಕೊಟ್ಟ ಸೂಚನೆಗಳು, ನಿರ್ದೇಶನಗಳು ಚಾಚೂ ತಪ್ಪದೆ ಜಾರಿ ಆಗಿದೆಯಾ? ಎಷ್ಟು ಜಾರಿ ಆಗಿದೆ ಎನ್ನುವ ಕುರಿತು ಸಭೆಗೆ ಸ್ಪಷ್ಟ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾರ್ಚ್, ಏಪ್ರಿಲ್, ಮೇ ತಿಂಗಳಿಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಇದೆ. ಆಗ 11 ಸಾವಿರ ಮೆಗಾವ್ಯಾಟ್ ಬಳಕೆ ಆಗುತ್ತಿತ್ತು. ಈಗ 15-16 ಸಾವಿರ ಮೆಘಾವ್ಯಾಟ್ ವಿದ್ಯುತ್ ಗೆ ಬೇಡಿಕೆ ಇದೆ. ರೈತರ ಪಂಪ್ ಸೆಟ್ ಮತ್ತು ಜನರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ನಕಾಶೆ, ಯೋಜನೆ ಸಿದ್ಧಪಡಿಸಿ ಅದಕ್ಕೆ ತಕ್ಕಂತೆ ಕ್ರಮ ವಹಿಸಬೇಕು. ಸದ್ಯ ಕಟಾವಿಗೆ ಬರುವ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಂಡ್ಯ ಜಿಲ್ಲೆಯ ಹಲವು ಭಾಗಗಳಲ್ಲಿ ಆನೆ, ಚಿರತೆ, ಹಾವಿನ ಕಾಟ ಇದ್ದು ಕೃಷಿಗೆ ರಾತ್ರಿ ವೇಳೆಗಿಂತ ಹಗಲಿನಲ್ಲೇ ನಿರಂತರ ಐದು ಗಂಟೆ ವಿದ್ಯುತ್ ಕೊಡಬೇಕು ಎನ್ನುವ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಕ್ರಮ ವಹಿಸಲು ಸಾಧ್ಯವೇ ಪರೀಕ್ಷಿಸಿ ಎಂದರು.
ದಿನ ಬಿಟ್ಟು ದಿನ ಬೇರೆ ಬೇರೆ ಬ್ಯಾಚ್ ಗಳಲ್ಲಿ ನಿರಂತರ ಐದು ಗಂಟೆ 3 ಫೇಸ್ ವಿದ್ಯುತ್ ಸರಬರಾಜು ಕಡ್ಡಾಯವಾಗಿ ಆಗಲೇಬೇಕು. ಯಾವ ವೇಳೆಯಲ್ಲಿ ವಿದ್ಯುತ್ ಸರಬರಾಜು ಆಗುತ್ತದೆ ಎನ್ನುವ ಮಾಹಿತಿ ಆಯಾ ಭಾಗದ ರೈತರಿಗೆ ಕೊಡಬೇಕು. ಈ ಸಭೆಯಲ್ಲಿ ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ಚಾಚೂ ತಪ್ಪದೆ ಜಾರಿ ಮಾಡಬೇಕು. ರೈತರಿಗೆ ದ್ರೋಹ ಮಾಡದೆ ಅವರಿಗೆ ನೆರವಾಗಿ. ತಪ್ಪಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಮಂಡ್ಯ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗಬಾರದು. ಬೇಕಿದ್ದರೆ ಎಷ್ಟಾದರೂ ಹಣ ಕೇಳಿ. ಕುಡಿಯುವ ನೀರಿನ ಬಗ್ಗೆ ದೂರು ಬಂದರೆ ನೇರವಾಗಿ ಜಿಲ್ಲಾ ಪಂಚಾಯ್ತಿ CEO ಅವರನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಮಳವಳ್ಳಿಯಲ್ಲಿ ಕುಡಿಯುವ ನೀರು ಪೈಪ್ ಲೈನ್ ಕಾಮಗಾರಿಯನ್ನು ಅರ್ಧಕ್ಕೇ ನಿಲ್ಲಿಸಿ, ಕಳಪೆ ಕಾಮಗಾರಿ ಮಾಡಿರುವ ಕುರಿತು ತನಿಖೆ ನಡೆಸಿ ಎಲ್ಲಿ ತಪ್ಪಾಗಿದೆ ಎಂದು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಹೇಳಿದರು.
100 ಬೆಡ್ ಗಳ ಹೆರಿಗೆ ಆಸ್ಪತ್ರೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಬಾಕಿ ಕೆಲಸ ಮುಗಿಸಲು ಕೇವಲ 8 ಕೋಟಿ ರೂಪಾಯಿ ಅಗತ್ಯವಿದ್ದು, ಈ ಹಣ ಬಿಡುಗಡೆಗೊಳಿಸುವುದು ಎಂದರು.
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ಅಗತ್ಯ ಅಂಡರ್ ಪಾಸ್, ಡ್ರೈನೇಜ್ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ನಡೆಸಬೇಕಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ, ನಾನು ಈ ಬಗ್ಗೆ ಕೇಂದ್ರ ಸಚಿವರನ್ನು ಭೇಟಿಯಾದಾಗ ಅಗತ್ಯ ಕಾಮಗಾರಿಗಳಿಗೆಲ್ಲಾ ಅನುಮತಿ ನೀಡುವ ಭರವಸೆ ನೀಡಿದ್ದರು. ಆದಷ್ಟು ಬೇಗ ಸಂಬಂಧಪಟ್ಟವರನ್ನು ಸಂಪರ್ಕಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು ಜನರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…