ಬರಗಾಲ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರ ಕೆಲಸ ಶೂನ್ಯ- ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ

 

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಮರೀಚಿಕೆ ಆಗಿದೆ. ಯಾವುದೇ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಸೂಕ್ತ ರೀತಿಯಲ್ಲಿ ಅನುದಾನ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.

ತಾಲೂಕಿನ ಚಿಕ್ಕಮಧುರೆಯಲ್ಲಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮನ್ನು ತಾವೇ ತಮ್ಮ ಬೆನ್ನನ್ನು ತಟ್ಟಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದೆಹಲಿ ಚಲೋ ಎಂದು ಡ್ರಾಮಾ ಮಾಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದಕ್ಕೆ ಹೊರಟಿದ್ದರು ಎಂದು ಗುಡುಗಿದರು.

ಗ್ಯಾರೆಂಟಿ ಯೋಜನೆಗಳ ಹೆಸರೇಳಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು. ಆದರೆ ಆ ಯೋಜನೆಗಳು ಶೇ.20ರಷ್ಟು ಜನರಿಗೆ ತಲುಪಿಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ. ಬರಪರಿಹಾರವನ್ನ ಸೂಕ್ತರೀತಿಯಲ್ಲಿ ಬಿಡುಗಡೆ ಮಾಡಿದೇ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು‌ ಕಾಂಗ್ರೆಸ್ ಸರ್ಕಾರ ವಿರುದ್ಧ ಕಿಡಿಕಾರಿದರು.

ದೇಶದ ಭವಿಷ್ಯದ ದೃಷ್ಟಿಯಿಂದ ಹಾಗೂ ದೇಶ ಅಭಿವೃದ್ಧಿಪತದತ್ತ ಮುನ್ನೆಡಸಲು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ‌ಮಂತ್ರಿಯಾಗಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ ಎಂದು ತಿಳಿಸಿದರು.

2019ರ ಲೋಕಸಭೆ ಚುನಾವಣೆಯಲ್ಲಿ ಬೂತ್‌ಗಳಲ್ಲಿ ಗಳಿಸಿದ್ದ ಮತಗಳಿಗಿಂತ ಈ ಬಾರಿ ಶೇ.10ರಷ್ಟು ಮತವನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಲಾಗಿದೆ ಎಂದರು.

ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ತಿಳಿಸುತ್ತೇವೆ. ಅದೇರೀತಿ ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆಯೂ ಸಹ ಅರಿವು ಮೂಡಿಸುತ್ತೇವೆ ಎಂದು ಹೇಳಿದರು.

2047ರ ಹೊತ್ತಿಗೆ ಭಾರತವು ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು, ದೇಶ ಪರಿಪೂರ್ಣವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕನಸು ಕಂಡಿದ್ದಾರೆ. ಆ ಕನಸನ್ನ ನನಸಾಗಲು ಗ್ರಾಮಗಳು ಅಭಿವೃದ್ಧಿ ಹೊಂದಬೇಕಿದೆ ಎಂದು ತಿಳಿಸಿದರು‌.

ಈ ವೇಳೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಶಾಸಕ ಧೀರಜ್ ಮುನಿರಾಜ್ ಸೇರಿದಂರೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

One thought on “ಬರಗಾಲ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರ ಕೆಲಸ ಶೂನ್ಯ- ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ

Leave a Reply

Your email address will not be published. Required fields are marked *

error: Content is protected !!