ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ ರಾಗಿ ಬೆಳೆಗಾರರ ಪರವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರೀಮಿಯಂ ಮೊತ್ತವನ್ನು ತಮ್ಮ ಸ್ವಂತ ವೆಚ್ಚದಲ್ಲಿ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಗಸ್ಟ್‌ 7ರಿಂದ 14ರವರೆಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿಗೆ ಅವಕಾಶವಿದ್ದು, ರಾಗಿ ಬೆಳೆಯುವ ರೈತರು ಅಗತ್ಯ ದಾಖಲೆಗಳೊಂದಿಗೆ ಶಾಸಕರ ನಿವಾಸಕ್ಕೆ ಆಗಮಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಒಂದು ಎಕರೆ ಜಮೀನಿಗೆ 400 ರೂ. ಪ್ರೀಮಿಯಂ ಪಾವತಿಸಬೇಕಿದ್ದು, ಈ ಮೊತ್ತವನ್ನು ತಮ್ಮ ವತಿಯಿಂದಲೇ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಬೆಳೆ ನಾಶವಾದಲ್ಲಿ ರೈತರಿಗೆ ಸುಮಾರು 19,950 ರೂ. ವಿಮಾ ಪರಿಹಾರ ದೊರೆಯಲಿದ್ದು, ಈ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಅರ್ಹ ರೈತರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ರೈತರು ತಮ್ಮ ಜಮೀನಿನ ಪಹಣಿ, ಫ್ರೂಟ್ ಐಡಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳುವಂತೆ ಶಾಸಕ ಧೀರಜ್ ಮುನಿರಾಜ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರಾಗಿ ಬೆಳೆಗಾರರಿಗೆ ಈ ಯೋಜನೆ ಆರ್ಥಿಕ ಭದ್ರತೆಯನ್ನು ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

18 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

20 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago