ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಾಜ್ಯದ 53 ತಾಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ದೃಢೀಕರಿಸಿ ಅಧಿಸೂಚನೆ ಹೊರಡಿಸಿದ್ದು, ಈ ಪಟ್ಟಿಯಲ್ಲಿ ದೊಡ್ಡಬಳ್ಳಾಪುರವೂ ಸ್ಥಾನ ಪಡೆದಿದೆ.

2020ರ ಬರ ನಿರ್ವಹಣಾ ಕೈಪಿಡಿಯಲ್ಲಿ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಬರ ಪರಿಸ್ಥಿತಿಯ ಪರಿಶೀಲನೆ ನಡೆಸಲಾಗಿದೆ. ‘ಕ್ರಾಪ್ ಲಾಸ್ GT’ ಆಪ್ ಮೂಲಕ ಸಂಗ್ರಹಿಸಲಾದ ಮಾಹಿತಿಯ ಜೊತೆಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ನಡೆಸಿದ ಗ್ರೌಂಡ್ ಟ್ರೂಥಿಂಗ್ ವರದಿಯನ್ನೂ ಪರಿಗಣಿಸಿ ಬರಪೀಡಿತ ತಾಲೂಕುಗಳನ್ನು ಗುರುತಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ 190ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದರೂ, ಸರ್ಕಾರ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿತ್ತು. ಇದಕ್ಕೆ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ಬರದ ತೀವ್ರತೆ ಹೆಚ್ಚಿರುವ ಇನ್ನಷ್ಟು ತಾಲೂಕುಗಳನ್ನು ಪಟ್ಟಿಗೆ ಸೇರ್ಪಡೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು.

ಬಳಿಕ 23 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು. ಇದೀಗ ಮತ್ತಷ್ಟು 53 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ನಡೆಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಅದರ ಆಧಾರದ ಮೇಲೆ ಈ ತಾಲೂಕುಗಳನ್ನು ಬರಪೀಡಿತವೆಂದು ದೃಢೀಕರಿಸಲಾಗಿದೆ.

ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆ ಕೊರತೆ, ಬೆಳೆ ನಷ್ಟ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಪರಿಗಣಿಸಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಶಾಸಕ ಧೀರಜ್ ಮುನಿರಾಜ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದೇ ವೇಳೆ, ದೊಡ್ಡಬಳ್ಳಾಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂಬ ಆಗ್ರಹ ತಾಲೂಕಿನ ರೈತರು ಹಾಗೂ ಸಾರ್ವಜನಿಕರಿಂದಲೂ ಬಲವಾಗಿ ಕೇಳಿಬಂದಿತ್ತು. ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಘೋಷಣೆಯಿಂದ ಸರ್ಕಾರದ ಪರಿಹಾರ ಹಾಗೂ ನೆರವು ದೊರೆಯುವ ನಿರೀಕ್ಷೆ ಹೆಚ್ಚಾಗಿದೆ.

ದೊಡ್ಡಬಳ್ಳಾಪುರ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವುದು, ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 hour ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

3 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

14 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

14 hours ago