Categories: ರಾಜ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ. ಬಿಡುಗಡೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33,000 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ದೆಹಲಿಗೆ ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಕೇಂದ್ರ ಸರ್ಕಾರದ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದು ಹೇಳಿದ್ದಾರೆ.

ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಗೆ ಸಾಕ್ಷಿ. ನಾವು ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ಪಕ್ಷ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ರಾಜ್ಯ ಬಿಜೆಪಿಯವರು ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ  ನರೇಂದ್ರಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು‌.

ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ. ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದು ಹೇಳಿದರು.

 ಒಬ್ಬಂಟಿಗಳಾಗಿದ್ದ ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರ ಕೊಲೆಯಾಗಿರುವ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯ ತಿಳಿಯಲಿದೆ ಎಂದರು.

ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿದ್ದಾರೆ. ನಮಗೆ ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದರು. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿ ಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದು ತಿಳಿಸಿದರು.

ಸಿಎಂ ಕುರ್ಚಿ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ  ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಿಂದೆ ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

21 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

22 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago