ದೇವನಹಳ್ಳಿ ಪೊಲೀಸರಿಂದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 20ಕ್ಕೂ ಹೆಚ್ಚು ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿಯ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿರುವ ಫಾರಂ ಹೌಸ್ ನಲ್ಲಿ ನಿನ್ನೆ ರಾತ್ರಿಯಿಂದ ರೇವ್ ಪಾರ್ಟಿ ನಡೆಯುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಪೊಲೀಸರು ರೇವ್ ಪಾರ್ಟಿ ಮೇಲೆ ರೈಡ್ ಮಾಡಿದ್ದಾರೆ ರೈಡ್ ಸಂದರ್ಭದಲ್ಲಿ 23 ಯುವಕರು 7 ಯುವತಿಯರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದಲ್ಲಿ ನಡೆದ ದಾಳಿ ನಡೆದಿದೆ. ದಾಳಿ ವೇಳೆ ಮಾದಕ ವಸ್ತುಗಳು ಸಹ ಪತ್ತೆಯಾಗಿದೆ.
ರೇವ್ ಪಾರ್ಟಿ ಮಾಡುತ್ತಿದ್ದ ಯುವಕ ಯುವತಿಯರು. ಬಂಧನಕ್ಕೊಳಗಾದ ಯುವಕ ಯುವತಿಯರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.