ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಸಂದ್ರ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ರಾಗಿ, ಜೋಳ ಬೆಳೆ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ ರೈತರಿಂದ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿ ಜೂನ್, ಜುಲೈ ನಲ್ಲಿ ಕಡಿಮೆ ಮಳೆ ಆಗಿದೆ. ಆಗಸ್ಟ್ 15 ರೊಳಗೆ ಮಳೆ ಬರದಿದ್ದಲ್ಲಿ ಬಿತ್ತನೆ ಆಗಿರುವ ಬೆಳೆಗಳಿಗೆ ತೊಂದರೆ ಆಗುತ್ತದೆ. ಸಾಧ್ಯವಾದಷ್ಟು ಶಾರ್ಟ್ ಟರ್ಮ್ ರಾಗಿ ಬೆಳೆ ಆಯ್ಕೆ ಮಾಡಿಕೊಳ್ಳಿ ಬೇಗ ಬೆಳೆ ಬರುತ್ತದೆ ಎಂದು ರೈತರಿಗೆ ಸಲಹೆ ನೀಡಿದರು.

*ತಪ್ಪದೇ ಬೆಳೆ ವಿಮೆ ಮಾಡಿಸಿ*

ಮಳೆ ಅಭಾವದಿಂದ ಬೆಳೆ ನಷ್ಟ ಆಗುವ ಸಂಭವವಿದೆ. ಹಾಗಾಗಿ ತಪ್ಪದೇ ಎಲ್ಲಾ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಇದರಿಂದ ನಷ್ಟ ಪರಿಹಾರ ಸರಿದೂಗಲಿದೆ ಎಂದರು. ಈಗಾಗಲೇ ಹಲವಾರು ರೈತರು ರಾಗಿ, ಜೋಳ ಬಿತ್ತನೆ ಮಾಡಿದ್ದಾರೆ. ಮಳೆ ಕೊರತೆಯಿಂದ ಸರಿಯಾಗಿ ಹುಟ್ಟಿಲ್ಲ. ಆಗಸ್ಟ್ 30 ವರೆಗೆ ಕಾದು ನೋಡಬೇಕು ಮಳೆ ಬರದಿದಲ್ಲಿ ಸರ್ಕಾರ ಪರಿಹಾರದ ಬಗ್ಗೆ ಚಿಂತನೆ ಮಾಡಲಿದೆ ಎಂದು ಸಚಿವರು ಹೇಳಿದರು.

ಜಾನುವಾರುಗಳಿಗೆ ಮೇವಿಗೆ ಸಂಬಂಧಿಸಿದಂತೆ ರೈತರಿಗೆ ಮೇವು ಬಿತ್ತನೆ ಬೀಜ ಪೂರೈಕೆ ಮಾಡಿ. ಮೇವು ಕಿಟ್ ಗಳನ್ನು, ಸೈಲೇಜ್ ಆಹಾರದ ಬಗ್ಗೆ ರೈತರಿಗೆ ಅರಿವು ಮೂಡಿಸಿ, ಪ್ರಸ್ತುತ ಸನ್ನಿವೇಶದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಪಶುಸಂಗೋಪನೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಮಂಗಲ ಕೆರೆಯಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಿದರು. ಕೆರೆಗಳ ಹೂಳೆತ್ತುವ ಕೆಲಸ ಮೊದಲು ಆಗಬೇಕಿದೆ. ನಂತರ ನೀರು ತುಂಬಿಸುವ ಕೆಲಸ ಮಾಡಬೇಕು. ಕೆರೆಗಳಲ್ಲಿರುವ ಬಿದಿರು ತೆಗೆಯಬೇಕು. ಅರಣ್ಯ ಇಲಾಖೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೆರೆಗೆ ಹುರಿದು ಬರುವ ನೀರಿನ ಕಾಲುವೆಗಳನ್ನು ಸ್ವಚ್ಚಗೊಳಿಸಿ ನೀರು ಸರಾಗವಾಗಿ ಹರಿಯಲು ಅನುಕೂಲವಾದರೆ ಮಳೆಗಾಲದಲ್ಲಿ ನೀರು ತುಂಬಲಿದೆ. ಎಲ್ಲಾ ಕೆರೆಗಳ ಸುತ್ತಲೂ ಬೌಂಡರಿ ಫಿಕ್ಸ್ ಮಾಡಿ ಸುತ್ತಲು ಟ್ರೆಂಚ್ ಅಗೆದು, ಹಣ್ಣಿನ ಗಿಡಗಳನ್ನು ಹಾಕಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ತೋಟಗಾರಿಕೆ, ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

6 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

9 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

12 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

14 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

15 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago