ಬಲವಂತದ ಭೂಸ್ವಾಧೀನಕ್ಕೆ ವಿರೋಧ ಸೇರಿ 5 ಮಹತ್ವದ ನಿರ್ಣಯ: ಸಮ್ಮೇಳನದ 5 ನಿರ್ಣಯಗಳು ಇಲ್ಲಿವೆ ಓದಿ…

ಭೂಮಿ, ನೀರು, ಪರಿಸರ, ಭಾಷೆ ಮತ್ತು ಉದ್ಯೋಗಕ್ಕೆ ಸಂಬಂಧಪಟ್ಟ 5 ಮಹತ್ವದ ನಿರ್ಣಯಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೈಗೊಂಡಿದೆ.

ಭಾನುವಾರ ಸಮ್ಮೇಳನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ನಿರ್ಣಯಗಳನ್ನು ಮಂಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯಿಕ ಚಿಂತನೆಗಳನ್ನು ಮಾತ್ರ ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸದೆ ನಾಡಿನ ಸಮಗ್ರ ಅಭಿವೃದ್ದಿ ಮತ್ತು ಸವಾಲು, ನೆಲದ ಹೋರಾಟಗಳು, ಆತಂಕಗಳ ಬಗ್ಗೆಯೂ ತನ್ನ ಇಚ್ಛಾಶಕ್ತಿಯನ್ನು ಹಲವು ವೇಳೆ ಪ್ರದರ್ಶಿಸಿದೆ. ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಆಶೋತ್ತರಗಳೂ ಸಾಹಿತ್ಯಿಕ ಚಿಂತನೆಗಳ ಮೂಲ ಆಶಯವೇ ಆಗಿದೆ ಎಂದರು.

*ಸಮ್ಮೇಳನದ 5 ನಿರ್ಣಯಗಳು:*

1. ಅಭಿವೃದ್ದಿಯ ಹೆಸರಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಕೈಗಾರಿಕೆ ಹಾಗೂ ಇತರೆ ಉದ್ದೇಶಗಳಿಗಾಗಿ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾದೀನ ಪಡಿಸಿಕೊಳ್ಳುವ ಪ್ರಯತ್ನಗಳನ್ನು ಸಮ್ಮೇಳನ ಸ್ಪಷ್ಟವಾಗಿ ವಿರೋಧಿಸುತ್ತದೆ. ರೈತರ ಹಿತಾಸಕ್ತಿಯೇ ಪರಮೋಚ್ಛವಾಗಿದ್ದು, ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿಯಲ್ಲಿಕಳೆದ 1 ಸಾವಿರಕ್ಕೂ ಹೆಚ್ಚು ದಿನಗಳಿಂದ ಅನ್ನದಾತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.

2. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ, ಕೊನಘಟ್ಟ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಹಾಗೂ ರಾಸಾಯನಿಕ ತ್ಯಾಜ್ಯ ನೀರನ್ನು ಜೀವಂತ ಕೆರೆಗಳಿಗೆ ಹರಿಸುತ್ತಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಕೆರೆಗಳ ಸಂರಕ್ಷಣೆ ಕುರಿತ ಹೋರಾಟವನ್ನು ಸಮ್ಮೇಳನ ಬೆಂಬಲಿಸುತ್ತದೆ. ಈ ಭಾಗದ ಗ್ರಾಮಗಳಿಗೆ 3ನೇ ಹಂತದ ಶುದ್ದೀಕರಿಸಿದ ನೀರನ್ನು ಪೂರೈಸುವ ಮತ್ತು ಶುದ್ದ ಕುಡಿಯುವ ನೀರಿನ ಪೂರೈಕೆಗೆ ಕೂಡಲೇ ಕ್ರಮ ವಹಿಸುವಂತೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡುತ್ತದೆ.

3. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆ-ಕುಂಟೆಗಳು, ಜಲಮೂಲಗಳು, ಜೀವಿ ವೈವಿಧ್ಯತೆಯನ್ನು ರಕ್ಷಿಸಿ, ಪರಂಪರೆಯ ಅನನ್ಯತೆಯನ್ನು ಉಳಿಸಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ದೊಡ್ಡಬಳ್ಳಾಪುರ ಸೇರಿದಂತೆ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಬಿಬಿಎಂಪಿ ಕಸ ಸಂಸ್ಕರಣಾ ನೂತನ ಘಟಕಗಳನ್ನು ತೆರೆಯಬಾರದು.

4. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಕನ್ನಡ ನುಡಿ ಎಲ್ಲ ಹಂತಗಳಲ್ಲೂ ಅನುಷ್ಠಾನಗೊಳ್ಳಬೇಕು. ಕನ್ನಡವನ್ನು ಭವಿಷ್ಯದ ಉದ್ಯೋಗದಾಯಿ ಭಾಷೆಯಾಗಿ ರೂಪಿಸುವ ನಿಟ್ಟಿನಲ್ಲಿ ವಿಜ್ಞಾನ, ತಂತ್ರಜ್ಞಾನ, ಆಡಳಿತ, ಕಾನೂನಿನ ಭಾಷೆಯಾಗಿ ರೂಪಿಸಲು ಕ್ರಮ ವಹಿಸಬೇಕು. ಪಾರಿಭಾಷಿಕ ಪದಕೋಶಗಳ ರಚನೆ ಮತ್ತು ಪ್ರಕಟಣೆಗೆ ಸರ್ಕಾರ ಮುಂದಾಗಬೇಕು.

5. ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಇರುವ ಕೈಗಾರಿಕಾ ವಸಾಹತುಗಳು, ಕಾರ್ಖಾನೆ, ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಬೇಕು. ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಸೀಮಿತವಾಗದೆ, ಉನ್ನತ ಹಂತದ ಹುದ್ದೆಗಳಲ್ಲೂ ಸ್ಥಳೀಯರಿಗೆ ಮೀಸಲಾತಿ ಜಾರಿಗೊಳ್ಳಬೇಕು. ಉದ್ಯೋಗ ಕೌಶಲ್ಯಗಳ ತರಬೇತಿಗೆ ಕ್ರಮ ವಹಿಸಬೇಕು. ಜ್ಞಾನಾಧಾರಿತವಾಗಿ ಎಲ್ಲ ಭಾಷೆಗಳಿಗೂ ಮನ್ನಣೆ ನೀಡುವ ಕರ್ನಾಟಕದಲ್ಲಿ ಹಿಂದಿ ಸೇರಿದಂತೆ ಯಾವುದೇ ಭಾಷೆಯ ಬಲವಂತದ ಹೇರಿಕೆಯನ್ನು ಸಮ್ಮೇಳನ ಸ್ಪಷ್ಟವಾಗಿ ವಿರೋಧಿಸುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.

ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಜಿಲ್ಲಾ ಕೋಶಾಧ್ಯಕ್ಷ ಡಾ.ಮುನಿರಾಜು, ಕಾರ್ಯದರ್ಶಿ ಅಶ್ವತ್ಥಗೌಡ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ದೇವರಾಜ್, ನೆಲಮಂಗಲ ತಾಲೂಕು ಕಾರ್ಯದರ್ಶಿ ಸದಾನಂದ ಆರಾಧ್ಯ, ಭಾನುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

46 minutes ago

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

4 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

7 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

7 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

8 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

11 hours ago