ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟಗೊಂಡು ಸುಮಾರು 34 ಮಂದಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಇನ್ನೂ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯ ಮಸೀದಿಯೊಂದರ ಬಳಿ ಈದ್ ಇ ಮಿಲಾದುನ್ ನಬಿ ಮೆರವಣಿಗೆಗಾಗಿ ನೂರಾರು ಜನರು ಸೇರಿದ್ದರು. ಈ ವೇಳೆ ಬಾಂಬ್ ಸ್ಫೋಟಗೊಂಡಿದೆ ಎನ್ನಲಾಗಿದೆ.